- Advertisement -


- Advertisement -
ಉಡುಪಿ: ಪ್ರದೀಪ್ ಪೂಜಾರಿ ಮೇಲಿನ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮಧ್ಯಪ್ರದೇಶದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸದ್ಯ ಆರೋಪಿಗಳನ್ನು ಉಡುಪಿಗೆ ಕರೆತರಲಾಗುತ್ತಿದ್ದು, ಕಾನೂನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅಧಿಕೃತವಾಗಿ ಬಂಧಿಸಲಾಗುವುದು. ನಂತರ ಆರೋಪಿಗಳ ಗುರುತು ಹಾಗೂ ಇತರ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
- Advertisement -


