Monday, April 29, 2024
Homeಕ್ರೀಡೆಸೋತರು ಕೋಟ್ಯಂತರ ಭಾರತೀಯರ ಹೃದಯ ಗೆದ್ದ ಪ್ರಗ್ನಾನಂದ

ಸೋತರು ಕೋಟ್ಯಂತರ ಭಾರತೀಯರ ಹೃದಯ ಗೆದ್ದ ಪ್ರಗ್ನಾನಂದ

spot_img
- Advertisement -
- Advertisement -

ನ್ಯೂಸ್ ಡೆಸ್ಕ್; ಚೆಸ್ ವಿಶ್ವಕಪ್ ಫೈನಲ್ 2023ರಲ್ಲಿ ವಿಶ್ವ ನಂ. 1 ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸೆನ್ ಎದುರು ಭಾರತದ 18 ವರ್ಷದ ರಮೇಶ್‌ಬಾಬು ಪ್ರಗ್ನಾನಂದ ಮಂಡಿಯೂರಿದ್ದಾರೆ. ಪಂದ್ಯದಲ್ಲಿ ಸೋತರೂ ಪ್ರಗ್ನಾನಂದ ಕೋಟ್ಯಂತರ ಭಾರತೀಯರ ದಿಲ್ ಕದ್ದಿದ್ದಾರೆ.

ಬುಧವಾರ ನಡೆದ 2ನೇ ಗೇಮ್​ನಲ್ಲಿ ಕಪ್ಪು ಕಾಯಿಗಳೊಂದಿಗೆ ಚದುರಂಗ ಚಲನೆ ಆರಂಭಿಸಿದ್ದ ಪ್ರಜ್ಞಾನಂದ ಆರಂಭದಲ್ಲೇ ಸಮಬಲದ ಹೋರಾಟ ನಡೆಸಿದ್ದರು. ಕಾರ್ಲ್​ಸೆನ್ ಜಾಣ ಚಲನೆಗೆ ಅತ್ಯುತ್ತಮ ಚೆಕ್​ ನಡೆಗಳ ಮೂಲಕ ಪ್ರಜ್ಞಾನಂದ ಪ್ರತ್ಯುತ್ತರ ನೀಡಿದ್ದರು. ಪರಿಣಾಮ 22 ನಡೆಗಳ ನಂತರ ಕೂಡ ಪಂದ್ಯವು ಸಮತೋಲಿತವಾಗಿತ್ತು.

ಈ ಸಮಬಲವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾದ ಕಾರ್ಲ್​ಸೆನ್ 30 ನಡೆಗಳ ನಂತರ ಪಂದ್ಯವನ್ನು ಡ್ರಾಗೊಳಿಸಿದರು. ಇದರೊಂದಿಗೆ ಫೈನಲ್ ಪಂದ್ಯವು ಟೈಬ್ರೇಕ್​ನತ್ತ ಸಾಗಿತು.ಗುರುವಾರ ನಡೆದ ಟೈಬ್ರೇಕ್​ನ ಮೊದಲ ಸುತ್ತಿನ ಫಸ್ಟ್ ಗೇಮ್​ನ 16 ಚಲನೆಗಳ ನಂತರ, ಕಾರ್ಲ್‌ಸೆನ್‌ನ ‘ಬಿಷಪ್’ ಗಾಗಿ ಪ್ರಜ್ಞಾನಂದ ತನ್ನ ‘ನೈಟ್’ (ಹೋರ್ಸ್ ಹೆಡ್) ಅನ್ನು ತ್ಯಾಗ ಮಾಡಿದರು. ಇದರ ಬೆನ್ನಲ್ಲೇ ಇಬ್ಬರು ತಮ್ಮ ರಾಣಿಯನ್ನೂ ಕೂಡ ಕಳೆದುಕೊಂಡರು. ಆದರೆ 21ನೇ ನಡೆಯ ವೇಳೆಗೆ ಕಾರ್ಲ್​ಸೆನ್ ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದರು. ಇದೇ ವೇಳೆ ಪ್ರಜ್ಞಾನಂದ ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡಿದರು.

ಈ ಜಾಣ ನಡೆಯ ಮೂಲಕ 25 ನಡೆಗಳ ಬಳಿಕ ಪ್ರಜ್ಞಾನಂದ ಸಮಬಲ ಸಾಧಿಸುವಲ್ಲಿ ಯಶಸ್ವಿಯಾದರು. ಆದರೆ 34 ನಡೆಗಳ ವೇಳೆಗೆ ಇಬ್ಬರು ರೂಕ್ ಕಾಯಿಕೆಯನ್ನು ಕಳೆದುಕೊಂಡಿದ್ದರು. ಇದಾಗ್ಯೂ 47 ಮೂವ್​ಗಳ ಬಳಿಕ ಟೈಬ್ರೇಕ್​ನ ಮೊದಲ ಗೇಮ್​ನಲ್ಲಿ ಜಯ ಸಾಧಿಸುವಲ್ಲಿ ಯಶಸ್ವಿಯಾದ ಕಾರ್ಲ್‌ಸೆನ್ 1-0 ಮುನ್ನಡೆ ಸಾಧಿಸಿದರು.

ಇತ್ತ ಮಾಡು ಇಲ್ಲವೇ ಮಡಿ ಸ್ಥಿತಿಯಲ್ಲಿ ಟೈಬ್ರೇಕ್​ನ 2ನೇ ಗೇಮ್​ ಅನ್ನು ಆರಂಭಿಸಿದ್ದ ಪ್ರಜ್ಞಾನಂದ ಪ್ರಾರಂಭದಲ್ಲೇ ಹಿನ್ನಡೆ ಅನುಭವಿಸಿದರು. ಅಲ್ಲದೆ ಪ್ರತಿ ಚಲನೆಗೂ ಹೆಚ್ಚಿನ ಸಮಯ ತೆಗೆದುಕೊಂಡರು. ಈ ಹಂತದಲ್ಲಿ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ ಕಾರ್ಲ್​​ಸೆನ್ ಮ್ಯಾಚ್​ ಅನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾದರು. ಈ ಮೂಲಕ 1-0 ಅಂತರದಿಂದ ಜಯ ಸಾಧಿಸಿ ಕಾರ್ಲ್​ಸೆನ್ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದರು.

- Advertisement -
spot_img

Latest News

error: Content is protected !!