Sunday, June 7, 2026
HomeUncategorizedಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ; ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ...

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ; ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

- Advertisement -
- Advertisement -

ಬೆಂಗಳೂರು:ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಸದ್ಯಕ್ಕಂತೂ ಬಿಡುಗಡೆ ಭಾಗ್ಯವಿಲ್ಲ.ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮೊದಲ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಅವರು ಸಲ್ಲಿಸಿದ್ದಂತ ಅರ್ಜಿಯನ್ನು ಇಂದು ಕೋರ್ಟ್ ವಜಾಗೊಳಿಸಿದೆ.

ಹಾಸನದ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮೊದಲ ಪ್ರಕರಣದಲ್ಲಿ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ವಿಚಾರಣೆಯ ಬಳಿಕ ವಜಾಗೊಳಿಸಿದ್ದಾರೆ.

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪ್ರಜ್ವಲ್ ರನ್ನು , ಹೆಚ್ಚಿನ ವಿಚಾರಣೆಗಾಗಿ ಎಸ್‌ಐಟಿ ವಶಕ್ಕೆ ಪಡೆದು ತನಿಖೆ ನಡೆಸುತ್ತಿದೆ. ಅಲ್ಲದೇ ಪ್ರಕರಣ ಸಂಬಂಧ ಸ್ಥಳ ಮಹಜರು ಕೂಡ ನಡೆಸಲಾಗುತ್ತಿದೆಇದೀಗ ಜಾಮೀನು ಅರ್ಜಿ ವಜಾಗೊಂಡಿದ್ದ ಪ್ರಜ್ವಲ್ ಗೆ ಸದ್ಯಕ್ಕಂತೂ ಬಿಡುಗಡೆ ಭಾಗ್ಯವಿಲ್ಲ ಎನ್ನಲಾಗುತ್ತಿದೆ.

- Advertisement -

Latest News

error: Content is protected !!