Wednesday, June 24, 2026
Homeತಾಜಾ ಸುದ್ದಿಪ್ರಜ್ವಲ್ ರೇವಣ್ಣ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಅರೆಸ್ಟ್; ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ

ಪ್ರಜ್ವಲ್ ರೇವಣ್ಣ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಅರೆಸ್ಟ್; ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ

- Advertisement -
- Advertisement -

ಶಿವಮೊಗ್ಗ : ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರದ್ವಲ್ ರೇವಣ್ಣ ಜರ್ಮನಿಯ ಮ್ಯೂನಿಕ್ ವಿಮಾನ ನಿಲ್ದಾಣದಿಂದ ಲುಫ್ತಾನ್ಸ ಫ್ಲೈಟ್ ಮೂಲಕ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅವರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದ ತಕ್ಷಣ ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ಬಂಧನಕ್ಕೆ ವಾರಂಟ್ ಸಿದ್ಧಪಡಿಸಲಾಗಿದೆ. ವಿಶೇಷ ತನಿಕಾ ತಂಡದ ಅಧಿಕಾರಿಗಳು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದಿದ್ದಾರೆ.

ಆದರೆ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬಂದ ಮೇಲೆ ಖಚಿತವಾಗಲಿದೆ ಎಂದು ಶಿವಮೊಗ್ಗದಲ್ಲಿ ಗೃಹ ಇಲಾಖೆ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಈಗಾಗಲೇ ಪ್ರಜ್ವಲ್ ಆಗಮಿಸುತ್ತಿರುವ ವಿಮಾನ ಜರ್ಮನಿಯ ಯೂನಿಕ್ ಏರ್ಪೋರ್ಟ್ ಇಂದ ಟೆಕ್ ಆಫ್ ಆಗಿದೆ ಇಂದು ಮಧ್ಯರಾತ್ರಿ 12.30ಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಬಂದ ತಕ್ಷಣ ಎಸ್‌ಐಟಿ ಅಧಿಕಾರಿಗಳು ಅವರನ್ನು ಬಂಧಿಸಲಿದ್ದಾರೆ ಎನ್ನಲಾಗುತ್ತಿದೆ.

- Advertisement -

Latest News

error: Content is protected !!