Saturday, June 28, 2025
Homeತಾಜಾ ಸುದ್ದಿಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮೇ.31ಕ್ಕೆ ಮುಂದೂಡಿಕೆ

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮೇ.31ಕ್ಕೆ ಮುಂದೂಡಿಕೆ

spot_img
- Advertisement -
- Advertisement -

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನಿನ ಅರ್ಜಿಯ ವಿಚಾರಣೆಯನ್ನು ಕೋರ್ಟ್ ವಿಚಾರಣೆಯನ್ನು ಮೇ 31, ಶುಕ್ರವಾರಕ್ಕೆ ಮುಂದೂಡಿದೆ.


ಈ ವೇಳೆ ನ್ಯಾಯಾಲಯ ಎಸ್‌ಐಟಿಗೆ ನೋಟಿಸ್ ಜಾರಿಗೊಳಿಸಿದೆ. ಇಮೇಲ್ ಮೂಲಕ ವಕೀಲರು ವಕಾಲತ್ತು ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.ಇಮೇಲ್ ಮೂಲಕ ವಕೀಲರು ಪ್ರಜ್ವಲ್ ವಕಾಲತ್ತನ್ನು ಸ್ವೀಕರಿಸಿದ್ದಾರೆ ಎನ್ನಲಾಗಿದೆ.ಹಾಗಾಗಿ ಇದೀಗ ವಿಚಾರಣೆಯನ್ನು ಕೋರ್ಟ್ ಮೇ 31ಕ್ಕೆ ಮುಂದೂಡಿದೆ.

ಪ್ರಜ್ವಲ್ ಸಿಐಡಿ ಠಾಣೆ ಕ್ರೈಂ ನಂಬರ್ 20/2024 ಸೈಬರ್ ಕ್ರೈಂ ಠಾಣೆ ಕ್ರೈಂ ನಂಬರ್ 2/ 2024 ಹಾಗೂ ಹೊಳೆನರಸೀಪುರ ಠಾಣೆ ಕ್ರೈಂ ನಂಬರ್ 107/ 2024 ಸೇರಿದಂತೆ ಮೂರು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!