Thursday, June 4, 2026
Homeತಾಜಾ ಸುದ್ದಿಪ್ರಕರಣದ ಬಳಿಕ ಮೊಟ್ಟ ಮೊದಲ ಬಾರಿಗೆ ಫೇಸ್ ಬುಕ್ ನಲ್ಲಿ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ; ಸತ್ಯ...

ಪ್ರಕರಣದ ಬಳಿಕ ಮೊಟ್ಟ ಮೊದಲ ಬಾರಿಗೆ ಫೇಸ್ ಬುಕ್ ನಲ್ಲಿ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ; ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ಪೋಸ್ಟ್

- Advertisement -
- Advertisement -

ಬೆಂಗಳೂರು; ಅಶ್ಲೀಲ ವೀಡಿಯೋ ಪ್ರಕರಣ ಬಹಿರಂಗವಾದ ಬಳಿಕ ಮೊದಲ ಬಾರಿಗೆ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮೌನ ಮುರಿದಿದ್ದಾರೆ.

ಫೇಸ್ ಬುಕ್ ನಲ್ಲಿ ಈ ಬಗ್ಗೆ ಪೋಸ್ಟ್ ಒಂದನ್ನು ಹಾಕಿದ್ದು, ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದಿದ್ದಾರೆ, ಇನ್ನು  ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ ಎಂದು ಮನವಿ ಪತ್ರದ ಜೊತೆಗೆ ಪೋಸ್ಟ್ ಮಾಡಿದ್ದಾರೆ.

ಇನ್ನು ಪ್ರಜ್ವಲ್ ಪರ  ವಕೀಲರು ಎಸ್ ಐ ಟಿ ಅಧಿಕಾರಿಗಳಲ್ಲಿ 7 ದಿನಗಳ ಕಾಲವಕಾಶ ಕೇಳಿದ್ದಾರೆ,ನನ್ನ ಕಕ್ಷಿದಾರರು  ಬೆಂಗಳೂರಿನಿಂದ ಹೊರಗಡೆ ಪ್ರವಾಸದಲ್ಲಿದ್ದಾರೆ.

ಬೆಂಗಳೂರಿಗೆ ಬಂದು ವಿಚಾರಣೆಗೆ ಹಾಜರಾಗಲು 7 ದಿನ ಕಾಲವಕಾಶ ಬೇಕು ಎಂದು ಪ್ರಜ್ವಲ್ ಪರ ವಕೀಲ ಅರುಣ್ ಮನವಿ ಮಾಡಿದ್ದಾರೆ.

- Advertisement -

Latest News

error: Content is protected !!