Friday, June 5, 2026
Homeತಾಜಾ ಸುದ್ದಿಅಶ್ಲೀಲ ವೀಡಿಯೋ ಪ್ರಕರಣ; ಪ್ರಜ್ವಲ್‌ ರೇವಣ್ಣ ಪುರುಷತ್ವ ಪರೀಕ್ಷೆ

ಅಶ್ಲೀಲ ವೀಡಿಯೋ ಪ್ರಕರಣ; ಪ್ರಜ್ವಲ್‌ ರೇವಣ್ಣ ಪುರುಷತ್ವ ಪರೀಕ್ಷೆ

- Advertisement -
- Advertisement -

ಬೆಂಗಳೂರು : ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ಎಸ್ ಐಟಿ ಕಸ್ಟಡಿಯಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐಟಿ ಅಧಿಕಾರಿಗಳು ಪುರುಷತ್ವ ಪರೀಕ್ಷೆಗೆ ಒಳಪಡಿಸಿದ್ದಾರೆ.

ಪ್ರಜ್ವಲ್‌ ರೇವಣ್ಣ ಅವರ ವೀರ್ಯ, ರಕ್ತ ಮಾದರಿ ಸಂಗ್ರಹಿಸಲಾಗಿದೆ. ಅವರು ಲೈಂಗಿಕ ಕ್ರಿಯೆ ನಡೆಸುವ ಸಾಮರ್ಥ್ಯ ಖಚಿತಪಡಿಸಿಕೊಳ್ಳಲು ಪರೀಕ್ಷೆ ನಡೆಸಲಾಗಿದೆ.ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆ ಆವರಣದ ಆಟಲ್‌ ಬಿಹಾರಿ ವಾಜಪೇಯಿ ವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಪ್ರಜ್ವಲ್‌ ರೇವಣ್ಣ ಅವರ ವೈದ್ಯಕೀಯ ತಪಾಸಣೆ ನಡೆದಿದೆ. ಈ ಪರೀಕ್ಷಾ ವರದಿ ಇನ್ನೊಂದು ವಾರದಲ್ಲಿ ಎಸ್‌ ಐಟಿ ಕೈ ಸೇರಲಿದೆ.

ಎಸ್‌ ಐಟಿ ಅಧಿಕಾರಿಗಳು ಕೋರ್ಟ್‌ ಅನುಮತಿ ಪಡೆದು ಪ್ರಜ್ವಲ್‌ ರೇವಣ್ಣ ಅವರನ್ನು ಪರುಷತ್ವ ಪರೀಕ್ಷೆಗೆ ಒಳಪಡಿಸಿದ್ದಾರೆ. ಇದಕ್ಕಾಗಿ ತಜ್ಞರ ತಂಡ ರಚಿಸಲಾಗಿದೆ, ಈ ತಜ್ಞರ ತಂಡ ತನ್ನ ವರದಿಯನ್ನು ಎಸ್‌ ಐಟಿಗೆ ಸಲ್ಲಿಸಲಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಲೈಂಗಿಕ ಕ್ರಿಯೆ ನಡೆಸಲು ದೈಹಿಕವಾಗಿ ಆರೋಪಿ ಸಾಮರ್ಥ್ಯ ಹೊಂದಿದ್ದಾನೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಪುರುಷತ್ವ ಪರೀಕ್ಷೆ ಅಗತ್ಯವಾಗಿದೆ. ಈ ಕಾರಣಕ್ಕೆ ಎಸ್‌ ಐಟಿ ಅಧಿಕಾರಿಗಳು ಪುರಷತ್ವ ಪರೀಕ್ಷೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!