ಹಾಸನ; ನಿನ್ನೆಯಷ್ಟೇ ಜೆಡಿಎಸ್ ನ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ.ಕಳೆದ ಲೋಕಸಭಾ ಚುನಾವಣೆಯಲ್ಲಿ ಆಸ್ತಿ ವಿವರ ಸಲ್ಲಿಸುವಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಪ್ರಕರಣದಲ್ಲಿ ಹೈಕೋರ್ಟ್ ನ್ಯಾ. ಕೆ. ನಟರಾಜನ್ ಪೀಠ ಸಂಸತ್ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿತ್ತು. ಅಲ್ಲದೆ ಆರು ವರ್ಷಗಳ ಕಾಲ ಪ್ರಜ್ವಲ್ ರೇವಣ್ಣ ಅವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.
ಇನ್ನೂ ಹೈಕೋರ್ಟ್ ನೀಡಿರುವ ತೀರ್ಪಿಗೆ ತಡೆಯಾಜ್ಞೆ ತರಲು ಸೋಮವಾರದಂದು ಪ್ರಜ್ವಲ್ ರೇವಣ್ಣ ಅವರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.ಆದ್ದರಿಂದ ಇಂದು ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಹುಟ್ಟುರಾದ ಹೊಳೆನರಸೀಪುರದ ದೇವೇಶ್ವರ ಹಾಗೂ ಮಾವಿನಕೆರೆಯ ರಂಗನಾಥ ಸ್ವಾಮಿ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಹಾಗೂ ತಾತ ಎಚ್ ಡಿ ದೇವೇಗೌಡ, ಪೂಜೆ ನಂತರ ತಾತ ಹಾಗೂ ತಂದೆ ಎಚ್ ಡಿ ರೇವಣ್ಣ ಅವರ ಜೊತೆಗೆ ಚರ್ಚಿಸಿ ಕೋರ್ಟ್ ತೀರ್ಪಿನ ಬಗ್ಗೆ ಪ್ರಜ್ವಲ್ ಹಾಗೂ ಕುಟುಂಬಸ್ಥರು ಚರ್ಚೆ ನಡೆಸಲಿದ್ದಾರೆ. ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿ ತೀರ್ಪಿಗೆ ತಡೆಯಾಜ್ಞೆ ತರುವ ಬಗ್ಗೆ ಚರ್ಚಿಸಲಿದ್ದಾರೆ.
ಲೋಕಸಭೆ ಚುನಾವಣೆಗು ಮುನ್ನ ಹೈಕೋರ್ಟ್ ಈ ತೀರ್ಪು ನೀಡಿದ್ದು, ಇದಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿ ಈ ಆದೇಶಕ್ಕೆ ತಡೆಯಾಜ್ಞೆ ತರಬೇಕೆಂದು ಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.