Thursday, April 24, 2025
Homeತಾಜಾ ಸುದ್ದಿಮೇ 31ಕ್ಕೆ ‘SIT’ ಮುಂದೆ ವಿಚಾರಣೆಗೆ ಹಾಜರಾಗ್ತೀನಿ; ವಿಡಿಯೋ ಸಂದೇಶದ ಮೂಲಕ ಪ್ರತ್ಯಕ್ಷರಾದ ಪ್ರಜ್ವಲ್ ರೇವಣ್ಣ

ಮೇ 31ಕ್ಕೆ ‘SIT’ ಮುಂದೆ ವಿಚಾರಣೆಗೆ ಹಾಜರಾಗ್ತೀನಿ; ವಿಡಿಯೋ ಸಂದೇಶದ ಮೂಲಕ ಪ್ರತ್ಯಕ್ಷರಾದ ಪ್ರಜ್ವಲ್ ರೇವಣ್ಣ

spot_img
- Advertisement -
- Advertisement -

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣ ಎದುರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕೊನೆಗೂ ತಿಂಗಳ ಬಳಿಕ ವಿಡಿಯೋ ಸಂದೇಶದ ಮೂಲಕ ಪ್ರತ್ಯಕ್ಷರಾಗಿದ್ದರೆ.

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ವಿದೇಶದಲ್ಲಿದ್ದುಕೊಂಡು 2.20 ನಿಮಿಷಗಳ ವಿಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ. ಇನ್ನು ಅದರಲ್ಲಿ “ತಾನು ವಿದೇಶಕ್ಕೆ ತೆರಳುವುದು ಮೊದಲೇ ನಿರ್ಧಾರವಾಗಿತ್ತು ಎಂದು ಹೇಳಿಕೊಂಡಿದ್ದು ನಾನು ವಿದೇಶದಲ್ಲಿ ಎಲ್ಲಿದ್ದೇನೆ ಎಂದು ಮಾಹಿತಿ ಕೊಡದಿರುವುದಕ್ಕೆ ಖಂಡಿತವಾಗಿಯೂ ಕ್ಷಮೆ ಕೇಳುತ್ತೇನೆ. ನಾನು ಮತದಾನ ಮಾಡಿ ವಿದೇಶಕ್ಕೆ ಹೋಗುವ ದಿನ ನನ್ನ ಮೇಲೆ ಯಾವುದೇ ಪ್ರಕರಣವೂ ದಾಖಲಾಗಿರಲಿಲ್ಲ. ಎಸ್‌ಐಟಿ ಕೂಡ ರಚನೆ ಆಗಿರಲಿಲ್ಲ. ಏ.26ರಂದು ನಾನು ವಿದೇಶಕ್ಕೆ ಹೋಗುವುದು ಕೂಡ ಪೂರ್ವ ನಿರ್ಧರಿತವಾಗಿರುತ್ತದೆ. ವಿದೇಶದಲ್ಲಿ ಉಳಿದುಕೊಂಡು ಮೂರ್ನಾಲ್ಕು ದಿನದ ಬಳಿಕ ಯೂಟ್ಯೂಬ್‌ನಲ್ಲಿ ನ್ಯೂಸ್ ಚಾನೆಲ್ ನೋಡುವ ವೇಳೆ ಈ ಮಾಹಿತಿ ನನಗೆ ತಿಳಿದುಬಂದಿತು. ಇದಾದ ನಂತರ ಎಸ್ಐಟಿ ಕೂಡ ನನಗೆ ನೋಟಿಸ್ ಕೊಡುವ ಕೆಲಸ ಮಾಡಿತು. ಎಸ್‌ಯಟಿ ನೋಟಿಸ್‌ಗೆ ಎಕ್ಸ್‌ ಖಾತೆ ಮತ್ತು ನಮ್ಮ ವಕೀಲರ ಮೂಲಕ ವಿಚಾರಣೆಗೆ ಹಾಜರಾಜಲು 7 ದಿನಗಳ ಕಾಲಾವಕಾಶ ಕೇಳಿದ್ದೆ. ಈ ಸಮಯದಲ್ಲಿ ವಿರೋಧ ಪಕ್ಷದ ನಾಯಕರು ನನ್ನ ಬಗ್ಗೆ ಇಲ್ಲ ಸಲ್ಲದ ಆರೋಪಗಳನ್ನು ಮಾಡಿದ್ದರು ಇದರಿಂದ ನಾನೂ ಡಿಪ್ರೆಶನ್‌ಗೆ ಒಳಗಾಗಿದ್ದೆ,” ಎಂದು ಹೇಳಿಕೊಂಡಿದ್ದಾರೆ.

ಇದೇ ವೇಳೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಪತ್ರ, ಕುಮಾರಸ್ವಾಮಿ ಅವರ ಮನವಿಯ ಬಗ್ಗೆಯೂ ಪ್ರತಿಕ್ರಿಯೆ ನೀಡಿರುವ ಪ್ರಜ್ವಲ್ ರೇವಣ್ಣ, ತಂದೆ-ತಾಯಿ, ತಾತನಿಗೆ ಕ್ಷಮೆಕೋರುತ್ತೇನೆ, ಜನತೆ, ಜೆಡಿಎಸ್ ಕಾರ್ಯಕರ್ತರಿಗೂ ಕ್ಷಮೆ ಕೋರುತ್ತೇನೆ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!