- Advertisement -
![]()
- Advertisement -
ಉಡುಪಿ: ಕಾಂಗ್ರೆಸ್ ಪಕ್ಷ ಸೇರ್ಪಡೆ ಕುರಿತಾದ ಸುದ್ದಿ ಆಧಾರ ರಹಿತ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸ್ಪಷ್ಟಪಡಿಸಿದ್ದಾರೆ.
ತಾವು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಮತ್ತು ಮಾಹಿತಿ ಹರಿದಾಡುತ್ತಿದ್ದು, ಅದೆಲ್ಲವೂ ಆಧಾರ ರಹಿತ ಮತ್ತು ಸತ್ಯಕ್ಕೆ ದೂರ ಎಂದು ಪ್ರಮೋದ್ ಮಧ್ವರಾಜ್ ಸಾಮಾಜಿಕ ಜಾಲತಾಣದಲ್ಲೇ ಸ್ಪಷ್ಟನೆ ನೀಡಿದ್ದಾರೆ.
ಅಲ್ಲದೇ ತಾವು ಅಧಿಕಾರಕ್ಕಾಗಿ ಪರಿತಪಿಸುತ್ತಿಲ್ಲ, ಬಿಜೆಪಿಯಲ್ಲಿ ಯಾವುದೇ ಹುದ್ದೆ ನೀಡಿದರೂ ನಿರ್ವಹಿಸಲು ಸಿದ್ಧ ಎಂದೂ ಪ್ರಮೋದ್ ಮಧ್ವರಾಜ್ ತಮ್ಮ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ರೇಸ್ ನಲ್ಲಿ ಪ್ರಮೋದ್ ಮಧ್ವರಾಜ್ ಅವರ ಹೆಸರೂ ಕೇಳಿಬಂದಿತ್ತು.
- Advertisement -


