Wednesday, May 15, 2024
Homeತಾಜಾ ಸುದ್ದಿ"ಪಟಾಕಿಯಿಂದ ಆರೋಗ್ಯ ಹಾಳಾಗುತ್ತೆ ಎನ್ನುವುದಾದರೆ ಬಾರ್ ಬಗ್ಗೆಯೂ ಸರ್ಕಾರ ಯೋಚಿಸಲಿ"

“ಪಟಾಕಿಯಿಂದ ಆರೋಗ್ಯ ಹಾಳಾಗುತ್ತೆ ಎನ್ನುವುದಾದರೆ ಬಾರ್ ಬಗ್ಗೆಯೂ ಸರ್ಕಾರ ಯೋಚಿಸಲಿ”

spot_img
- Advertisement -
- Advertisement -

ಬೆಳಗಾವಿ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದೀಪಾವಳಿ ಹಬ್ಬದ ವೇಳೆ ಪಟಾಕಿ ನಿಷೇಧ ಮಾಡಿರುವುದಾಗಿ ಸಿಎಂ ಯಡಿಯೂರಪ್ಪ ಆದೇಶ ನೀಡಿದ ಬೆನ್ನಲ್ಲೇ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಟೀಕೆಗಳು ಕೇಳಿ ಬರುತ್ತಿದ್ದು, ಪಟಾಕಿ ಸಿಡಿಸುವುದರಿಂದ ಪರಿಸರ ನಾಶವಾಗುತ್ತೆಂಬುದು ಸರಿಯಲ್ಲ. ಪರಿಸರ ನಾಶಕ್ಕೆ ಹಲವಾರು ಕಾರಣಗಳಿವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮುತಾಲಿಕ್, ಪಟಾಕಿ ಸಿಡಿಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂಬುದಾದರೆ ಒಂದು ದಿನ ಪಟಾಕಿ ಹಚ್ಚುವುದರಿಂದ ಆರೋಗ್ಯ ಸಮಸ್ಯೆ ಕಡಿಮೆಯಾಗಲ್ಲ. ವರ್ಷವಿಡಿ ಪಬ್, ಬಾರ್ ತೆರೆಯಲು ಸರ್ಕಾರ ಅವಕಾಶ ನೀಡಿದೆ. ಇದರಿಂದ ರಾಜ್ಯದಲ್ಲಿ ಸಾವಿರಾರು ಹೆಣ್ಣು ಮಕ್ಕಳು ಬೀದಿಗೆ ಬಿದ್ದಿದ್ದಾರೆ. ಯುವಕರು ದುಶ್ಚಟಕ್ಕೆ ದಾಸರಾಗಿ ಕುಟುಂಬವನ್ನೇ ಬೀದಿಗೆ ತರುತ್ತಿದ್ದಾರೆ. ಇಡೀ ಸಮಾಜವೇ ಹಾಳಾಗುತ್ತಿದೆ. ಆರೋಗ್ಯದ ಬಗ್ಗೆ ಯೋಚನೆ ಮಾಡುವ ಸರ್ಕಾರ ಮದ್ಯಪಾನ ಮಾಡಲು, ಪಬ್, ಬಾರ್ ತೆರೆಯಲು ಯಾಕೆ ಅವಕಾಶ ನೀಡಿದೆ. ಪಟಾಕಿಯಿಂದ ಆರೋಗ್ಯ ಹಾಳಾಗುತ್ತದೆ ಎನ್ನುವುದಾದರೆ ಇವುಗಳ ಬಗ್ಗೆಯೂ ಸರ್ಕಾರ ಯೋಚಿಸಬೇಕಲ್ಲವೇ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಸರ್ಕಾರ ಪಟಾಕಿ ನಿಷೇಧ ಮಾಡಿರುವ ನಿರ್ಧಾರಕ್ಕೆ ಪರ ಹಾಗೂ ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಪರಿಸರವಾದಿಗಳು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಆದರೆ ಸಂಪ್ರದಾಯವಾದಿಗಳು ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದಾರೆ. ಪಟಾಕಿ ಸಿಡಿಸುವುದರಿಂದ ಪರಿಸರ ಹಾನಿ ಆಗುತ್ತದೆ ಎಂದರೆ ಪರಿಸರಕ್ಕೆ ಹಾನಿಯಾಗುವ ಎಲ್ಲವನ್ನೂ ನಿಷೇಧ ಮಾಡಿ ಎಂಬುವುದು ಸಂಪ್ರದಾಯವಾದಿಗಳ ವಾದವಾಗಿದೆ.

- Advertisement -
spot_img

Latest News

error: Content is protected !!