Saturday, June 6, 2026
Homeಕರಾವಳಿಬೆಳ್ತಂಗಡಿ :ಪ್ರಸನ್ನ ಕಾಲೇಜಿನ ವಿದ್ಯಾರ್ಥಿ ಅನಾರೋಗ್ಯದಿಂದ ನಿಧನ

ಬೆಳ್ತಂಗಡಿ :ಪ್ರಸನ್ನ ಕಾಲೇಜಿನ ವಿದ್ಯಾರ್ಥಿ ಅನಾರೋಗ್ಯದಿಂದ ನಿಧನ

- Advertisement -
- Advertisement -

ಬೆಳ್ತಂಗಡಿ : ರಕ್ತದೋತ್ತಡ ಸಮಸ್ಯೆಯಿಂದ ಬಳಲುತ್ತಿದ್ದ ಲಾಯಿಲದ ಕಾಶಿಬೆಟ್ಟಿನಲ್ಲಿರುವ ಪ್ರಸನ್ನ ಕಾಲೇಜು ವಿದ್ಯಾರ್ಥಿ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

ಬಾರ್ಯ ಗ್ರಾಮದ ಗಿರಿಗುಡ್ಡೆ ಸುಶೀಲ ಎಂಬುವವರ ಮಗ ಸುಮಂತ್ ಮಡಿವಾಳ(20) ಮೃತ ವಿದ್ಯಾರ್ಥಿ. ಕಳೆದ ಕೆಲ ದಿನಗಳಿಂದ ಮಂಗಳೂರಿನ ಫಸ್ಟ್ ನ್ಯುರೋ ಖಾಸಗಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದ. ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಒಂದು ವಾರದ ಹಿಂದೆ ಕಾಲೇಜಿನಲ್ಲಿ  ಬಿದ್ದಿದ್ದು ತಕ್ಷಣ ವಿದ್ಯಾರ್ಥಿಯನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಫಸ್ಟ್ ನ್ಯುರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಸಾವನ್ನಪ್ಪಿದ್ದಾನೆ. ವಿದ್ಯಾರ್ಥಿ ಮೊದಲೇ ರಕ್ತದೊತ್ತಡ ಸಮಸ್ಯೆಯಿಂದ  ಬಳಲುತ್ತಿದ್ದ ಎನ್ನಲಾಗಿದೆ. ವಿದ್ಯಾರ್ಥಿ ಬೆಳ್ತಂಗಡಿಯ ಪ್ರಸನ್ನ ಕಾಲೇಜಿನ ಕೊನೆಯ ವರ್ಷದ ಐಟಿಐ ವಿದ್ಯಾರ್ಥಿಯಾಗಿದ್ದ.

- Advertisement -

Latest News

error: Content is protected !!