- Advertisement -
![]()
- Advertisement -
ಉಡುಪಿ: ಕೆಲವು ಆಂತರಿಕ ರಾಜಕೀಯ ಬೆಳವಣಿಗೆಗಳ ಕಾರಣ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಪ್ರತಾಪ್ ಚಂದ್ರ ಶೆಟ್ಟಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯತ್ವಕ್ಕೆ (ಕೆಪಿಸಿಸಿ) ರಾಜೀನಾಮೆ ನೀಡಿದ್ದಾರೆ. ಆದರೆ ಅವರು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಲ್ಲಿ ಮುಂದುವರೆಯಲಿದ್ದಾರೆ ಎನ್ನಲಾಗಿದೆ.
ಇನ್ನು ರಾಜೀನಾಮೆ ಹಿನ್ನೆಲೆಯಲ್ಲಿ ಎಐಸಿಸಿ ಕಾರ್ಯದರ್ಶಿ, ಕೇರಳ ಶಾಸಕ ರೋಸಿ ಎಂ. ಜಾನ್ ಮತ್ತು ಕೆಪಿಸಿಸಿ ಕಾರ್ಯಾದ್ಯಕ್ಷ ದ್ರುವ ನಾರಾಯಣರವರು ಪ್ರತಾಪಚಂದ್ರ ಶೆಟ್ಟಿಯವರ ನಿವಾಸಕ್ಕೆ ಭೇಟಿ ನೀಡಿದ್ದಾರೆಂದು ತಿಳಿದುಬಂದಿದೆ.
ಈ ಮಹತ್ವದ ಬೆಳವಣಿಗೆಯ ಕುರಿತು ಮಾತನಾಡಿದ ಧ್ರುವ ನಾರಾಯಣ್, ಪ್ರತಾಪ್ ಚಂದ್ರ ಶೆಟ್ಟಿ ಅವರು ಪಕ್ಷದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ, ಯಾವುದೇ ಭಿನ್ನಾಭಿಪ್ರಾಯವಿಲ್ಲ, ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭಿವೃದ್ಧಿ ಹೊಂದುತ್ತಿದೆ ಎಂದು ಹೇಳಿದ್ದಾರೆ.
- Advertisement -


