Friday, April 26, 2024
Homeಕರಾವಳಿಸುರತ್ಕಲ್ ಟೋಲ್ ಗೇಟ್ ಹೋರಾಟಗಾರರಿಗೆ ಮಧ್ಯರಾತ್ರಿ ನೋಟಿಸ್ ನೀಡಿದ ವಿಚಾರ: ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ...

ಸುರತ್ಕಲ್ ಟೋಲ್ ಗೇಟ್ ಹೋರಾಟಗಾರರಿಗೆ ಮಧ್ಯರಾತ್ರಿ ನೋಟಿಸ್ ನೀಡಿದ ವಿಚಾರ: ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ಹೇಳಿದ್ದೇನು?

spot_img
- Advertisement -
- Advertisement -

ಮಂಗಳೂರು: ಸುರತ್ಕಲ್ ಟೋಲ್ ಗೇಟ್ ಹೋರಾಟಗಾರರ ಮನೆಗೆ ಮಧ್ಯರಾತ್ರಿ ಮನೆಗೆ ನುಗ್ಗಿ ನೊಟೀಸ್ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ಪ್ರತಿಕ್ರಿಯಿಸಿದ್ದಾರೆ. ಮಹಿಳೆಯರು ಇರುವ ಮನೆಗೆ ಯಾರು ಬೇಕಾದರೂ ಮಧ್ಯರಾತ್ರಿ ಬಂದು ಬಾಗಿಲು ತಟ್ಟಬಹುದೇ? ಇದೆಂತಾ ಪ್ರಜಾಪ್ರಭುತ್ವ? ಎಂದು ಪ್ರಶ್ನಿಸಿದ್ದಾರೆ.


ಸಾಮಾಜಿಕ ಜಾಲತಾಣದಲ್ಲಿ ಪೊಲೀಸ್ ಇಲಾಖೆ ವಿರುದ್ದ ಕಿಡಿಕಾರಿರುವ ಅವರು ಅಕ್ಟೋಬರ್ 18ರ ಟೋಲ್ ಗೇಟ್ ಹೋರಾಟವನ್ನು ಹತ್ತಿಕ್ಕಲು ನನ್ನ ಮನೆಗೆ ಮಧ್ಯರಾತ್ರಿ ಪೊಲೀಸರನ್ನು ಕಳುಹಿಸಿ ನೋಟಿಸ್ ನೀಡಿರುವ ಜಿಲ್ಲಾಡಳಿತಕ್ಕೆ ನಾಚಿಕೆಯಾಗಬೇಕು. ನಾನೊಬ್ಬ ಸಾಮಾಜಿಕ ಕಾರ್ಯಕರ್ತೆಯೇ ಹೊರತು ಉಗ್ರಗಾಮಿ ಅಲ್ಲ. ನಾನೊಬ್ಬ ಭಾರತ ದೇಶದ ಜವಾಬ್ದಾರಿಯುತ ಪ್ರಜೆಯಾಗಿ ಈ ದೇಶದ ಕಾನೂನನ್ನು ಗೌರವಿಸುತ್ತೇನೆ ಎಂದರು.


ಇನ್ನು ಶನಿವಾರ ಮಧ್ಯರಾತ್ರಿ ಸುರತ್ಕಲ್ ಠಾಣೆಯ 5 ಮಂದಿ ಪೊಲೀಸರು 11:45ಕ್ಕೆ ಕುಳಾಯಿಯಲ್ಲಿರುವ ನನ್ನ ಮನೆಗೆ ಬಂದಿರುವುದು ಸಿಸಿ ಕೆಮರಾದಲ್ಲಿ ದಾಖಲಾಗಿದೆ. ಈ ಸಂದರ್ಭದಲ್ಲಿ ನನ್ನ ಮನೆಯಲ್ಲಿ 74 ವರ್ಷ ಪ್ರಾಯದ ನನ್ನ ಅತ್ತೆ ಇದ್ದು ಪೊಲೀಸರ ನಡವಳಿಕೆಯಿಂದ ಭಯಭೀತರಾಗಿದ್ದರು. ನಾನು ಮನೆಯಲ್ಲಿ ಇರದ ಕಾರಣ ನೋಟಿಸ್ ಪಡೆದುಕೊಂಡಿಲ್ಲ. ನನ್ನ ಪ್ರಶ್ನೆ ಏನೆಂದರೆ ಮಂಗಳೂರು ನಿಜಕ್ಕೂ ಸುರಕ್ಷಿತವೇ? ಮಂಗಳೂರಿನಲ್ಲಿ ಮಹಿಳೆಯರು ಸುರಕ್ಷಿತರೇ? ಮಹಿಳೆಯರು ಇರುವ ಮನೆಗೆ ಯಾರು ಬೇಕಾದರೂ ಮಧ್ಯರಾತ್ರಿ ಬಂದು ಬಾಗಿಲು ತಟ್ಟಬಹುದೇ? ಇದೆಂತಾ ಪ್ರಜಾಪ್ರಭುತ್ವ? ಎಂದು ಪ್ರಶ್ನಿಸಿದ್ದಾರೆ.

- Advertisement -
spot_img

Latest News

error: Content is protected !!