Saturday, June 13, 2026
Homeಕರಾವಳಿಪ್ರವೀಣ್ ನೆಟ್ಟಾರ್ ಪತ್ನಿಗೆ ವೈಯಕ್ತಿಕ ನೆಲೆಯಲ್ಲಿ ನಾನು ಕೆಲಸ ಕೊಡಿಸುತ್ತೇನೆ; ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ...

ಪ್ರವೀಣ್ ನೆಟ್ಟಾರ್ ಪತ್ನಿಗೆ ವೈಯಕ್ತಿಕ ನೆಲೆಯಲ್ಲಿ ನಾನು ಕೆಲಸ ಕೊಡಿಸುತ್ತೇನೆ; ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಹೇಳಿಕೆ

- Advertisement -
- Advertisement -

ಮಂಗಳೂರು: ಪ್ರವೀಣ್ ನೆಟ್ಟಾರ್ ಪತ್ನಿಗೆ ವೈಯಕ್ತಿಕ ನೆಲೆಯಲ್ಲಿ ನಾನು ಕೆಲಸ ಕೊಡಿಸುತ್ತೇನೆ ಎಂದು ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಹೇಳಿಕೆ ನೀಡಿದ್ದಾರೆ.

ಪ್ರವೀಣ್ ನೆಟ್ಟಾರ್ ನಮ್ಮ ಬಿಲ್ಲವ ಸಮಾಜಕ್ಕೆ ಸೇರಿದವರು. ಅವರ ಪತ್ನಿಗೆ ಕೆಲಸ ಕೊಡುವುದು ದೊಡ್ಡ ವಿಷಯವಲ್ಲ, ಬಿಜೆಪಿ ಕೊಡಿಸಿರುವ ಗುತ್ತಿಗೆ ಆಧಾರದ ಕೆಲಸದ ಅವಧಿ ಮುಗಿದಿದೆ. ಇದು ನಿಜಕ್ಕೂ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ನಾಚಿಕೆ ಪಡಬೇಕಾದ ವಿಷಯ ಎಂದು ಹೇಳಿದ್ದಾರೆ.

ಬಿಜೆಪಿ ಸರಕಾರ ಇದ್ದಾಗಲೇ ಮುಖ್ಯಮಂತ್ರಿಯವರಿಗೆ, ಎಂಪಿ ನಳಿನ್ ಕುಮಾರ್ ಕಟೀಲ್ ಗೆ ನೆಟ್ಟಾರ್ ಪತ್ನಿಗೆ ಶಾಶ್ವತ ಉದ್ಯೋಗ ಕಲ್ಪಿಸಬಹುದಿತ್ತು. ಅದನ್ನು ಬಿಟ್ಟು ತಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಹತ್ಯೆಗೀಡಾದಾಗ ಆತನ ಕುಟುಂಬದ ಸದಸ್ಯರಿಗೆ ತಾತ್ಕಾಲಿಕ ನೆಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನೀಡಲಾಗಿದೆ. ಇದು ನಮ್ಮ ಬಿಲ್ಲವ ಸಮಾಜ ಖಂಡಿತಾ ಒಪ್ಪುವುದಿಲ್ಲ. ನಳಿನ್ ಕುಮಾರ್ ಕಟೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲಿ ಎಂದು ಹೇಳಿದ್ದಾರೆ.ನೆಟ್ಟಾರ್ ಪತ್ನಿಗೆ ವೈಯಕ್ತಿಕ ನೆಲೆಯಲ್ಲಿ ನಾನು ಕೆಲಸ ನೀಡುತ್ತನೆ. ನೆಟ್ಟಾರ್ ಅವರ ಪತ್ನಿಗೆ ಉದ್ಯೋಗ ಕೊಡಲು ನಾವೆಲ್ಲರೂ ಒಂದಾಗಿ ಪ್ರಾಮಾಣಿಕ ಪ್ರಯತ್ನ ಮಾಡಲಿದ್ದೇವೆ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!