Tuesday, February 27, 2024
Homeಕರಾವಳಿಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಎರಡು ದಿನಗಳ ಕಾಲ ಪೆರೋಲ್

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಎರಡು ದಿನಗಳ ಕಾಲ ಪೆರೋಲ್

spot_img
spot_img
- Advertisement -
- Advertisement -

ಸುಳ್ಯ: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಎರಡು ದಿನಗಳ ಪೆರೋಲ್ ಸಿಕ್ಕಿದೆ.

ಸುಳ್ಯ ಮೂಲದ ಇಬ್ರಾಹಿಂ ಶಾ ನಾವೂರು ಎಂಬಾತನನ್ನು ಪ್ರವೀಣ್‌ ಹತ್ಯೆ ಪ್ರಕರಣದಲ್ಲಿ 15ನೇ ಆರೋಪಿಯಾಗಿ ಪೊಲೀಸರು ಬಂಧಿಸಿದ್ದರು.ಸುಳ್ಯದಲ್ಲಿ ಆತನ ತಂಗಿಯ ಮದುವೆ ಹಿನ್ನೆಲೆಯಲ್ಲಿ ಎರಡು ದಿನ ಪೆರೋಲ್ ನೀಡಲಾಗಿತ್ತು.

ಶನಿವಾರ ಬೆಳಗ್ಗೆ ಮೈಸೂರಿನ ಜೈಲಿನಿಂದ ಪೊಲೀಸ್‌ ಭದ್ರತೆಯಲ್ಲಿ ವಿವಾಹ ಸಮಾರಂಭದ ಸ್ಥಳಕ್ಕೆ ಕರೆತರಲಾಗಿತ್ತು. ಜಾಮೀನು ಅವಧಿ ಮುಗಿದ ಬಳಿಕ ಮತ್ತೆ ಮೈಸೂರಿನ ಜೈಲಿಗೆ ಸೇರಿಸಲಾಗಿದೆ.

2022ರ ಜುಲೈ 26ರಂದು ಬೆಳ್ಳಾರೆಯಲ್ಲಿ ಪ್ರವೀಣ್‌ ಅವರ ಕೋಳಿ ಅಂಗಡಿಯ ಎದುರೇ ದುಷ್ಕರ್ಮಿಗಳು ಅವರ ಮೇಲೆ ಎರಗಿದ್ದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್‌ಐಎ (ರಾಷ್ಟ್ರೀಯ ತನಿಖಾ ದಳ) ಹಲವರನ್ನು ಬಂಧಿಸಿತ್ತು. ಈಗಲೂ ಕೆಲವು ಆರೋಪಿಗಳಿಗಾಗಿ ಎನ್‌ಐಎ ಶೋಧ ನಡೆಸುತ್ತಿದೆ.

 

- Advertisement -

Latest News

error: Content is protected !!