Sunday, October 18, 2026
Homeಅಪರಾಧಬೆಳ್ತಂಗಡಿ : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಪಡಂಗಡಿಯಲ್ಲಿ ಎನ್.ಐ.ಎ ದಾಳಿ

ಬೆಳ್ತಂಗಡಿ : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಪಡಂಗಡಿಯಲ್ಲಿ ಎನ್.ಐ.ಎ ದಾಳಿ

- Advertisement -
- Advertisement -

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಜೂನ್ 27 ರಂದು(ಇಂದು) ಬೆಳ್ತಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಕಾರು ಚಾಲಕ ನೌಷದ್ ಎಂಬಾತನ ಮನೆ ಮೇಲೆ ಎನ್.ಐ.ಎ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ನೌಷದ್ ಮನೆಯಲ್ಲಿರಲ್ಲಿಲ್ಲ ಎನ್ನಲಾಗಿದೆ. ಹಾಗಾಗಿ ಅಧಿಕಾರಿಗಳು ಎನ್.ಐ.ಎ ಕಚೇರಿಗೆ ಹಾಜರಾಗಲು ನೌಷದ್ ಗೆ ನೋಟಿಸ್ ನೀಡಿ ಅಲ್ಲಿಂದ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇಂದು ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಎನ್.ಐ.ಎ ಮೂಲಗಳು ಮಹಾಎಕ್ಸ್ ಪ್ರೆಸ್ ವೆಬ್ ಸೈಟ್ ಗೆ ಮಾಹಿತಿ ನೀಡಿದೆ.

- Advertisement -

Latest News

error: Content is protected !!