Saturday, April 27, 2024
Homeತಾಜಾ ಸುದ್ದಿಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳಿಗೆ ನೆರವಾದವರ ಆಸ್ತಿ ಮುಟ್ಟುಗೋಲಿಗೆ ಕ್ರಮ: ಎಡಿಜಿಪಿ ಅಲೋಕ್ ಕುಮಾರ್...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳಿಗೆ ನೆರವಾದವರ ಆಸ್ತಿ ಮುಟ್ಟುಗೋಲಿಗೆ ಕ್ರಮ: ಎಡಿಜಿಪಿ ಅಲೋಕ್ ಕುಮಾರ್ ಎಚ್ಚರಿಕೆ

spot_img
- Advertisement -
- Advertisement -

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಕೆಲವರು ರಕ್ಷಣೆ ಮಾಡುತ್ತಿದ್ದು, ಆರೋಪಿಗಳಿಗೆ ನೆರವಾದವರ ಆಸ್ತಿ ಮುಟ್ಟುಗೋಲಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಂಗಳೂರು ಎಡಿಜಿಪಿ ಆಲೋಕ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿ ಪ್ರಚೋದನೆ ನೀಡಿದವರು, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದವರ ಮೇಲೂ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಯಾರೆಲ್ಲಾ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಅವರೆಲ್ಲರ ಮೇಲೆ ಕರ್ನಾಟಕ ಪೊಲೀಸ್‌ ಹಾಗೂ ಎನ್‌ಐಎ ಮೂಲಕ ಕ್ರಮ ಜರುಗಿಸುತ್ತೇವೆ. ಪರಾರಿಯಾದ ಆರೋಪಿಗಳನ್ನು ಪತ್ತೆಹಚ್ಚಲು ಕೋರ್ಟ್‌ ಮುಖಾಂತರ ವಾರೆಂಟ್‌ ಪಡೆದು ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಲು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

- Advertisement -
spot_img

Latest News

error: Content is protected !!