Thursday, June 4, 2026
Homeಕರಾವಳಿಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳ ಬಗ್ಗೆ ಸುಳಿವು ಕೊಟ್ಟವರಿಗೆ ನಗದು ಬಹುಮಾನ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳ ಬಗ್ಗೆ ಸುಳಿವು ಕೊಟ್ಟವರಿಗೆ ನಗದು ಬಹುಮಾನ

- Advertisement -
- Advertisement -

ಮಂಗಳೂರು: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ನಾಲ್ವರು ನಿಷೇಧಿತ ಪಿಎಫ್‌ಐ ಕಾರ್ಯಕರ್ತರ ಹೆಸರನ್ನು ಎನ್‌ಐಎ ರಿಲೀಸ್‌ ಮಾಡಿದೆ. ಇವರನ್ನು ಹುಡುಕಲು ಸಹಾಯ ಮಾಡುವಂತೆ ಎನ್‌ಐಎ ಕೋರಿದೆ. ಪ್ರತಿ ಆರೋಪಿಯ ಮಾಹಿತಿ ನೀಡಿದವರಿಗೆ ನಗದು ಬಹುಮಾನ ಘೋಷಿಸಿದೆ.

ತಲೆಮರೆಸಿಕೊಂಡಿರುವ ಬೆಳ್ಳಾರೆಯ ಮಹಮ್ಮದ್‌ ಮುಸ್ತಾಫಾ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ , ಮಡಿಕೇರಿಯ ತೂಫೇಲ್ 5 ಲಕ್ಷ, ಕಲ್ಲುಮಟ್ಲುವಿನ ಉಮರ್‌ ಫಾರೂಕ್‌ 2 ಲಕ್ಷ, ಬೆಳ್ಳಾರೆಯ ಅಬೂಬಕರ್‌ ಸಾದಿಕ್ ಬಗ್ಗೆ ಮಾಹಿತಿ ಕೊಟ್ಟವರಿಗೆ 2 ಲಕ್ಷ ಘೋಷಿಸಿದೆ. ಆರೋಪಿಗಳ ಬಗ್ಗೆ ಸುಳಿವು ನೀಡುವವರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದೆ

- Advertisement -

Latest News

error: Content is protected !!