- Advertisement -
- Advertisement -
ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಪ್ರವೀಣ್ ನನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿದೆ. ಉಡುಪಿ ಸಬ್ ಜೈಲಿನಿಂದ ಆರೋಪಿ ಪ್ರವೀಣ್ ಚೌಗಲೆಯನ್ನು ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರಿಸಲಾಗಿದೆ.
ನ್ಯಾಯಾಂಗ ಬಂಧನದಲ್ಲಿರುವ ಪ್ರವೀಣ್ ನನ್ನು ಉಡುಪಿಯ ಸಬ್ ಜೈಲಿಗೆ ರವಾನಿಸಲಾಗಿತ್ತು. ಆದರೆ ಈ ಜೈಲಿನಲ್ಲಿ ಈತನಿಗೆ ಭದ್ರತೆ ನೀಡುವುದು ಸವಾಲಾಗಿದೆ. ಸಹಕೈದಿಗಳೇ ಈತ ಮಾಡಿದ ಹೀನ ಕೆಲಸಕ್ಕೆ ಆತನಿಗೆ ಹಲ್ಲೆ ಮಾಡುವ ಸಾಧ್ಯತೆ ಇದೆ. ಹಾಗಾಗಿ ಸೀಮಿತ ವ್ಯವಸ್ಥೆಯಲ್ಲಿ ಪ್ರತ್ಯೇಕ ಸೆಲ್ ನಲ್ಲಿ ಇರಿಸುವುದು ಕಷ್ಟಸಾಧ್ಯ. ಈ ಹಿನ್ನೆಲೆ ಸದ್ಯ ಆರೋಪಿಯನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಡಿಸೆಂಬರ್ 5ರ ತನಕ ಈತನಿಗೆ ನ್ಯಾಯಾಂಗ ಬಂಧನವಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕವೇ ವಿಚಾರಣೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
- Advertisement -