Thursday, June 4, 2026
Homeಕರಾವಳಿಉಡುಪಿಉಡುಪಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆಯಿಂದ ಜಾಮೀನು ಕೋರಿ ಕೋರ್ಟ್...

ಉಡುಪಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆಯಿಂದ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ

- Advertisement -
- Advertisement -

ಉಡುಪಿ: ನವೆಂಬರ್ 12 ರಂದು ನೇಜಾರು ಸಮೀಪದ ತೃಪ್ತಿ ನಗರದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆಯಿಂದ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿದೆ.

ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಆರೋಪಿ ಚೌಗುಲೆ ಪರ ವಕೀಲ ಕೆ.ಎಸ್.ಎನ್. ರಾಜೇಶ್ ಎಂಬವರಿಂದ ಜಾಮೀನು‌ ಅರ್ಜಿ ಸಲ್ಲಿಕೆಯಾಗಿದೆ

ಡಿಸೆಂಬರ್ 20ರಂದು ಆಕ್ಷೇಪಣೆ ಸಲ್ಲಿಸಲು ಅವಕಾಶ ಇದ್ದು, ಡಿಸೆಂಬರ್ 18ರ ವರೆಗೆ ಕೋರ್ಟ್ ಆರೋಪಿಗೆ ನ್ಯಾಯಾಂಗ ಬಂಧನ ವಿಸ್ತರಿಸಿದೆ.

ಸದ್ಯ ಆರೋಪಿ ಪ್ರವೀಣ್ ಚೌಗುಲೆಯನ್ನು ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿ ಇರಿಸಲಾಗಿದೆ‌.

ನವೆಂಬರ್ 12 ರಂದು ಬೆಳಗ್ಗೆ ತನ್ನ ಸಹೋದ್ಯೋಗಿಯಾಗಿದ್ದ ಅಯ್ನಾಝ್ ಮನೆಗೆ ಬಂದಿದ್ದ ಪ್ರವೀಣ್ ಚೌಗುಲೆ ನಾಲ್ವರನ್ನು ಬರ್ಬರವಾಗಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದನು.

- Advertisement -

Latest News

error: Content is protected !!