Tuesday, October 13, 2026
Homeಕರಾವಳಿಕೋವಿಡ್ ನಾಲ್ಕನೇ ಅಲೆ ಆತಂಕ ಹಿನ್ನೆಲೆ: ಕೇರಳ ಗಡಿಯಲ್ಲಿ ಮುನ್ನೆಚ್ಚರಿಕೆ ಬಗ್ಗೆ ಪ್ರಧಾನಿ ಸಭೆ ಬಳಿಕ...

ಕೋವಿಡ್ ನಾಲ್ಕನೇ ಅಲೆ ಆತಂಕ ಹಿನ್ನೆಲೆ: ಕೇರಳ ಗಡಿಯಲ್ಲಿ ಮುನ್ನೆಚ್ಚರಿಕೆ ಬಗ್ಗೆ ಪ್ರಧಾನಿ ಸಭೆ ಬಳಿಕ ತೀರ್ಮಾನ

- Advertisement -
- Advertisement -

ವಿಜಯಪುರ: ಕೋವಿಡ್ ನಾಲ್ಕನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ಕೇರಳ ಗಡಿಯಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳುವ ಬಗ್ಗೆ ಪ್ರಧಾನಿ ಜೊತೆಗಿನ ಸಭೆ ಬಳಿಕ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ಮಾತನಾಡಿದ ಸಿಎಂ, ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಜೊತಗಿನ ಸಭೆ ಬಳಿಕ ತೀರ್ಮಾನಿಸುವುದಾಗಿ ತಿಳಿಸಿದ್ದಾರೆ‌.

ಏರ್ ಪೋರ್ಟ್ ಮತ್ತು ರಾಜ್ಯಗಳ ಗಡಿಗಳಲ್ಲಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿರುವ ಸಿಎಂ ಬೊಮ್ಮಾಯಿ, ಕೇರಳ ಮತ್ತು ಮಹಾರಾಷ್ಟ್ರ ಗಡಿಗಳಲ್ಲಿನ ಮುನ್ನೆಚ್ಚರಿಕೆ ಬಗ್ಗೆ ಪ್ರಧಾನಿ ಜೊತೆಗಿನ ಸಭೆ ಬಳಿಕ ಪರಿಸ್ಥಿತಿ ಅವಲೋಕಿಸಿ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.

- Advertisement -

Latest News

error: Content is protected !!