Saturday, October 17, 2026
Homeತಾಜಾ ಸುದ್ದಿಕೇರಳ ಆನೆ ಸಾವು ದುರಂತ; ಓರ್ವ ಆರೋಪಿಯ ಬಂಧಿಸಿದ ಪೊಲೀಸರು

ಕೇರಳ ಆನೆ ಸಾವು ದುರಂತ; ಓರ್ವ ಆರೋಪಿಯ ಬಂಧಿಸಿದ ಪೊಲೀಸರು

- Advertisement -
- Advertisement -

ಕೇರಳದ ಪಾಲಕ್ಕಾಡ್ ಗರ್ಭಿಣಿ ಆನೆ ಸಾವು ದುರಂತಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಈ ಬಗ್ಗೆ ಸ್ವತಃ ಕೇರಳ ಅರಣ್ಯ ಸಚಿವ ಮಾಹಿತಿ ನೀಡಿದ್ದು, ಗರ್ಭಿಣಿ ಆನೆ ದುರಂತ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದ್ದು, ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ ಪಡೆದು ತನಿಖೆ ನಡೆಸುತ್ತಿದ್ದಾರೆ. ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ತನಿಖೆ ನಡೆಸುತ್ತಿದೆ. ಶೀಘ್ರದಲ್ಲೇ ಮೂಕ ಪ್ರಾಣಿಯ ಸಾವಿಗೆ ನ್ಯಾಯ ದೊರಕಿಸಿ ಕೊಡುತ್ತೇವೆ ಎಂದು ಹೇಳಿದ್ದಾರೆ.

ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ಪಿ ವಿಲ್ಸನ್ ಎಂಬಾತನನ್ನು ಬಂಧಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ಸಂಜೆಯ ವೇಳೆಗೆ ನೀಡಲಾಗುವುದು ಎಂದು ಸಚಿವರು ಹೇಳಿದ್ದಾರೆ.

- Advertisement -

Latest News

error: Content is protected !!