Thursday, June 25, 2026
Homeಕರಾವಳಿಬಂಟ್ವಾಳ: ಸಾಲ ಸಂಪರ್ಕ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರದ ಪೂರ್ವಭಾವಿ ಸಭೆ!

ಬಂಟ್ವಾಳ: ಸಾಲ ಸಂಪರ್ಕ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರದ ಪೂರ್ವಭಾವಿ ಸಭೆ!

- Advertisement -
- Advertisement -

ಬಂಟ್ವಾಳ : ಅಕ್ಟೋಬರ್ 30 ರಂದು ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಮತ್ತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಇವರ ಅಧ್ಯಕ್ಷತೆಯಲ್ಲಿ ಬಂಟವಾಳದ ಬಂಟರ ಭವನದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಕೇಂದ್ರ ಸರಕಾರದ ” ಸಾಲ ಸಂಪರ್ಕ” ಕಾರ್ಯಕ್ರಮ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರದ ಪೂರ್ವಭಾವಿ ಸಭೆ ಬಂಟ್ವಾಳ ವ್ಯಾಪ್ತಿಯ ವಿವಿಧ ಬ್ಯಾಂಕ್ ಗಳ ಪ್ರಬಂಧಕರುಗಳು, ಅಧಿಕಾರಿಗಳು ಹಾಗೂ ಬಿಜೆಪಿ ಪ್ರಮುಖರ ಜೊತೆ ಸಭೆ ಬಂಟ್ವಾಳ ದ ಬಂಟರ ಭವನದ ಹಾಲ್ ನಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಶಾಸಕ ರಾಜೇಶ್ ನಾಯ್ಕ್ ಅವರ ಉಪಸ್ಥಿತಿಯಲ್ಲಿ ಅ.23 ರಂದು ಶನಿವಾರ ಸಂಜೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲು ಕೇಂದ್ರ ಸರಕಾರದ ಎಲ್ಲಾ ಜನಪರ ಯೋಜನೆಗಳು ಜನರಿಗೆ ತಲುಪುವ ಮೂಲಕ ಪ್ರತಿಯೊಬ್ಬರಿಗೂ ಪ್ರಯೋಜನವಾಗಬೇಕು ಎಂಬ ನಿಟ್ಟಿನಲ್ಲಿ ಉತ್ತಮ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಈ ಕಾರ್ಯಕ್ರಮ ದಲ್ಲಿ ಸುಮಾರು 5 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇಟ್ಟುಕೊಂಡು ಕಾರ್ಯಕ್ರಮ ಆಯೋಜನೆ ಮಾಡಿದ್ದೇವೆ. ಇದೊಂದು ಐತಿಹಾಸಿಕ ಕಾರ್ಯಕ್ರಮ ವಾಗಿ ಮೂಡಿಬರಬೇಕು ಎಂಬ ನಿಟ್ಟಿನಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರ ನೇತ್ರತ್ವದಲ್ಲಿ ಅವರ ತಂಡ ಕಾರ್ಯಯೋಜನೆಯ ತಯಾರಿ ನಡೆಸಿದೆ. ಹಾಗಾಗಿ ಜಿಲ್ಲೆಯ ಹೆಚ್ಚಿನ ಜನರು ಭಾಗವಹಿಸುವಂತೆ ಅವರು ತಿಳಿಸಿದ್ದಾರೆ.

ಶಾಸಕ ರಾಜೇಶ್ ನಾಯ್ಕ್ ಅವರು ಮಾತನಾಡಿ ಕಾರ್ಯ ಕ್ರಮದ ಯಶಸ್ವಿಗಾಗಿ ಪೂರ್ವ ತಯಾರಿ ನಡೆಸಲಾಗಿದ್ದು ಅಧಿಕಾರಿಗಳ ಜೊತೆ ಪ್ರಥಮ ಸುತ್ತಿನ ಸಭೆ ನಡೆಸಲಾಗಿದೆ. ಇದೇ ರೀತಿ ಕಾರ್ಯಕರ್ತರು ಜೊತೆಯಾಗಿ ಕೆಲಸ ಮಾಡುವ ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲಾ ಅಗ್ರಣಿ ಬ್ಯಾಂಕ್ ನ ಮುಖ್ಯ ವ್ಯವಸ್ಥಾಪಕರಾದ ಪ್ರವೀಣ್ ರವರು ಕಾರ್ಯಕ್ರಮದ ಮಾಹಿತಿ ನೀಡಿದರು. ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ಮಾತನಾಡಿ ಸರಕಾರಿ ಕಾರ್ಯಕ್ರಮವಾದರೂ ಜನರ ಜೊತೆ ಸೇರಿಕೊಂಡು ಕಾರ್ಯಕ್ರಮ ಯಶಸ್ಸು ಮಾಡಲು ಸಂಸದರು ನಮ್ಮ ಮೇಲೆ ವಿಶ್ವಾಸವಿರಿಸಿ ಜವಬ್ದಾರಿ ಯನ್ನು ವಹಿಸಿ ಕೊಟ್ಟಿದ್ದಾರೆ. ಸುಮಾರು 5 ಸಾವಿರ ಜನರಿಗೆ ಊಟದ ವ್ಯವಸ್ಥೆ ಯನ್ನು ಕೆಳ ಅಂತಸ್ತಿನಲ್ಲಿ ಮಾಡಲಾಗಿದೆ. ವ್ಯವಸ್ಥಿತವಾಗಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.ಪ್ರಮುಖರ ನ್ನು ಈ ವ್ಯವಸ್ಥೆ ಜೊತೆ ಸೇರಿಸಿಕೊಂಡು ಕಾರ್ಯಕ್ರಮ ಯಶಸ್ಸು ಮಾಡುವ ಜವಬ್ದಾರಿ ವಹಿಸಿ ಕೊಂಡಿದ್ದೇವೆ.

ಎಮ್.ಐ.ಇ.ಎಲ್ ನಿಗಮದ ಅಧ್ಯಕ್ಷ ಸಂತೋಷ್ ಕಮಾರ್ ರೈ ಬೋಳಿಯಾರು, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ದೇವದಾಸ್ ಶೆಟ್ಟಿ, ಶಿಶು ಅಭಿವೃದ್ಧಿ ಮತ್ತು ಯೋಜನಾಧಿಕಾರಿ ಗಾಯತ್ರಿ ಕಂಬಳಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ್ಯ ಅರಳ, ರವೀಶ್ ಶೆಟ್ಟಿ ಕರ್ಕಳ, ಪ್ರಮುಖರಾದ ರಮನಾಥ ರಾಯಿ, ಪ್ರಭಾಕರ ಪ್ರಭು, ಮೋನಪ್ಪ ದೇವಶ್ಯ,ಪುರುಷೋತ್ತಮ ಶೆಟ್ಟಿ ವಾಮದಪದವು, ಚಿದಾನಂದ ರೈ, ಆನಂದ ಶಂಭೂರು , ಗಣೇಶ್ ರೈ ಮಾಣಿ, ಚಂದ್ರಾವತಿ, ಶೋಭಾ ಬೋಳಂತೂರು, ರಂಜಿತ್ ಮೈರ, ಯಶೋಧರ ಕರ್ಬೆಟ್ಟು, ಮಹೇಶ್ ಶೆಟ್ಟಿ,ಪ್ರಣಾಮ್ ಅಜ್ಜಿಬೆಟ್ಟು,ಕಾರ್ತಿಕ್ ಬಲ್ಲಾಳ್, ಅಶ್ವಥ್ ರಾವ್ ಬಾಳಿಕೆ, ಉಮೇಶ್ ಅರಳ, ವಿಜಯ ಕುಮಾರ್, ಸುರೇಶ್ ಕೋಟ್ಯಾನ್, ಸುದರ್ಶನ ಬಜ, ರಝಾಕ್ ತುಂಬೆ, ಕೇಶವ ದೈಪಲ ಮತ್ತಿತರರು ಉಪಸ್ಥಿತರಿದ್ದರು.

- Advertisement -

Latest News

error: Content is protected !!