Monday, May 20, 2024
Homeಕರಾವಳಿಪ್ರಧಾನಿ ಕಾರ್ಯಕ್ರಮಕ್ಕೆ ಜಿಲ್ಲಾಡಳಿತದಿಂದ ಎಲ್ಲಾ ಸಿದ್ಧತೆ; ಸುದ್ದಿಗೋಷ್ಠಿಯಲ್ಲಿ ಡಿಸಿ ಡಾ. ರಾಜೇಂದ್ರ ಹೇಳಿಕೆ

ಪ್ರಧಾನಿ ಕಾರ್ಯಕ್ರಮಕ್ಕೆ ಜಿಲ್ಲಾಡಳಿತದಿಂದ ಎಲ್ಲಾ ಸಿದ್ಧತೆ; ಸುದ್ದಿಗೋಷ್ಠಿಯಲ್ಲಿ ಡಿಸಿ ಡಾ. ರಾಜೇಂದ್ರ ಹೇಳಿಕೆ

spot_img
- Advertisement -
- Advertisement -

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಆಗಮ‌ನ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ದಕ್ಷಿಣ ಕನ್ನಡ  ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಮತ್ತು ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಜಂಟಿ ಸುದ್ದಿಗೋಷ್ಟಿ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಅಧಿಕೃತ ಸರ್ಕಾರಿ ‌ಕಾರ್ಯಕ್ರಮಕ್ಕೆ‌ ಬರುತ್ತಿದ್ದು, ಈ ಸಂಬಂಧ ಜಿಲ್ಲಾಡಳಿತ, ರಾಜ್ಯ ಸರ್ಕಾರ, ಎನ್ಎಂಪಿಟಿ ನೇತೃತ್ವದಲ್ಲಿ ತಯಾರಿ ಆಗಿದೆ ಎಂದು ಡಿಸಿ ಡಾ. ರಾಜೇಂದ್ರ ತಿಳಿಸಿದ್ದಾರೆ.

ಹಲವು ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ‌ನೆರವೇರಿಸಲಿದ್ದು, ಕೊಚ್ಚಿನ್ ನಿಂದ ಮಂಗಳೂರಿಗೆ ಆಗಮಿಸಿ ಸಮಾವೇಶದಲ್ಲಿ ‌ಪಾಲ್ಗೊಳ್ಳುತ್ತಾರೆ ಎಂದು ಡಾ. ರಾಜೇಂದ್ರ ಹೇಳಿದ್ದಾರೆ.

ಈ ಸಮಾವೇಶದಲ್ಲಿ ‌ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳು ಇರಲಿದ್ದು,
ಸುಮಾರು ಒಂದು ‌ಲಕ್ಷಕ್ಕೂ ಹೆಚ್ಚು ಜನರು ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಸೇರಲಿದ್ದಾರೆ.

ಭದ್ರತಾ ದೃಷ್ಟಿಯಿಂದ ಹಲವು ಕ್ರಮಗಳನ್ನು ‌ಕೈಗೊಳ್ಳಲಾಗಿದ್ದು, ಫಲಾನುಭವಿಗಳನ್ನ ಕರೆ ತರಲು ಸರ್ಕಾರಿ ಬಸ್ ಗಳನ್ನು ಬಳಸಲಾಗುತ್ತಿದೆ ಎಂದು ಡಿಸಿ ಮಾಹಿತಿ ನೀಡಿದ್ದಾರೆ.

ಬಸ್ ಗಳ ಕಾರ್ಯನಿರ್ವಹಣೆ ಹಾಗೂ ಟ್ರಾಫಿಕ್ ನಲ್ಲಿ ಸಮಸ್ಯೆ ಆಗುವ ಸಾಧ್ಯತೆ ಇದ್ದು, ಹೀಗಾಗಿ‌ ಮಂಗಳೂರು ಪೊಲೀಸ್  ಕಮಿಷನರೇಟ್ ವ್ಯಾಪ್ತಿಯಲ್ಲಿ ಈಗಾಗಲೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಆಗಿದ್ದು, ಅಧಿಕೃತ ಸರ್ಕಾರಿ‌ ಕಾರ್ಯಕ್ರಮವಾದ ಕಾರಣ ಜಿಲ್ಲಾಡಳಿತ ಪೂರ್ಣ ಸಿದ್ದತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಹೇಳಿದ್ದಾರೆ.

- Advertisement -
spot_img

Latest News

error: Content is protected !!