Saturday, May 18, 2024
Homeಕರಾವಳಿಮಂಗಳೂರಿನಲ್ಲಿ ಮೋದಿ ಕಾರ್ಯಕ್ರಮಕ್ಕೆ ೧ ಲಕ್ಷ ಜನ ನಿರೀಕ್ಷೆ;ಸಚಿವ ಸುನಿಲ್ ಕುಮಾರ್ ನೇತೃತ್ವದಲ್ಲಿ ಸಿದ್ಧತೆ; ಮೋದಿಗೆ...

ಮಂಗಳೂರಿನಲ್ಲಿ ಮೋದಿ ಕಾರ್ಯಕ್ರಮಕ್ಕೆ ೧ ಲಕ್ಷ ಜನ ನಿರೀಕ್ಷೆ;ಸಚಿವ ಸುನಿಲ್ ಕುಮಾರ್ ನೇತೃತ್ವದಲ್ಲಿ ಸಿದ್ಧತೆ; ಮೋದಿಗೆ ಪರಶುರಾಮ ಪುತ್ಥಳಿ ಉಡುಗೊರೆ

spot_img
- Advertisement -
- Advertisement -

ಮಂಗಳೂರು: ಪ್ರಧಾನಿ ನರೇಂದ್ರ‌ ಮೋದಿ ಆಗಮನದ ಹಿನ್ನೆಲೆಯಲ್ಲಿ ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಆಯೋಜಿಸಿರುವ ಸಮಾವೇಶದ ಯಶಸ್ಸಿಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್  ನೇತೃತ್ವದಲ್ಲಿ ಭರದ ಸಿದ್ಧತೆ ನಡೆಯುತ್ತಿದ್ದು ೧ ಲಕ್ಷಕ್ಕೂ ಮೇಲ್ಪಟ್ಟು ಜನರು ಸೇರುವ ನಿರೀಕ್ಷೆ ಇದೆ.

ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಯ ಸಮಾವೇಶ ನಡೆಯಲಿದ್ದು, ರಾಜಕೀಯವಾಗಿಯೂ ಇದು ಮಹತ್ವ ಪಡೆದಿರುವುದರಿಂದ ಸಣ್ಣಪುಟ್ಟ ಸಂಗತಿಗಳಿಗೂ ಬಿಜೆಪಿ ವಿಶೇಷ ಲಕ್ಷ್ಯ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಕಾರ್ಯಕ್ರಮದ ಖುದ್ದು ಮೇಲುಸ್ತುವಾರಿ ವಹಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಜತೆಗೆ ಈಗಾಗಲೇ ಸ್ಥಳ ಪರಿಶೀಲನೆ ಹಾಗೂ ಸಭೆ ನಡೆಸಲಾಗಿದೆ.

ಈ ಸಮಾವೇಶಕ್ಕೆ ಕರಾವಳಿ ಜಿಲ್ಲೆಗಳಲ್ಲಿ ಇತ್ತೀಚಿನ‌ ದಿನಗಳಲ್ಲಿ ಸೇರದೇ ಇರುವಷ್ಟು ಜನರನ್ನು ಸೇರಿಸಲಾಗುತ್ತಿದೆ. ಕರಾವಳಿ ಬಿಜೆಪಿಯ ಭದ್ರಕೋಟೆಯಾಗಿರುವುದರಿಂದಸ್ವಯಂಪ್ರೇರಣೆಯಿಂದಲೇ ಜನರು ಸಮಾವೇಶಕ್ಕೆ ಆಗಮಿಸಲಿದ್ದು, ಸುಮಾರು ಒಂದು ಲಕ್ಷ ಜನರು ಮೋದಿ ಭಾಷಣ ಕೇಳುವುದಕ್ಕೆ ಆಗಮಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

ಸಮಾವೇಶ ಸ್ಥಳಕ್ಕೆ ಉಭಯ ಜಿಲ್ಲೆಗಳಿಂದ ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಕರೆತರುವುದಕ್ಕೆ ಸುಮಾರು ೨೦೦೦ ಬಸ್ ವ್ಯವಸ್ಥೆ ಮಾಡಲಾಗಿದೆ. ಜತೆಗೆ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

‌ಕಾರ್ಯಕ್ರಮದ ಬಳಿಕ ಬಿಜೆಪಿ ಕೋರ್ ಕಮಿಟಿ ಸಭೆಯೂ ಸೇರಿದಂತೆ ಸುಮಾರು ಒಂದು ಗಂಟೆ ಕಾಲ ಪಕ್ಷದ ನಾಯಕರ ಜತೆಗೆ ಪ್ರಧಾನಿ ಮೋದಿ ಚರ್ಚೆ ನಡೆಸಲಿದ್ದು, ಇದಕ್ಕೆ ಬೇಕಾದ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.

ಪ್ರಧಾನಿ ಮೋದಿಯವರಿಗೆ ಈ ಕಾರ್ಯಕ್ರಮದ ನೆನಪಿಗಾಗಿ ತುಳುನಾಡು ನಿರ್ಮಾತೃ ಪರಶುರಾಮನ ಭವ್ಯ ಪುತ್ಥಳಿಯನ್ನು ಉಡುಗೊರೆ ರೂಪದಲ್ಲಿ ಕೊಡಲು ನಿಶ್ಚಯಿಸಲಾಗಿದೆ. ಈ ಪುತ್ಥಳಿಯನ್ನು ವಿಶೇಷ ಆಸ್ಥೆಯಿಂದ ಸಿದ್ಧಪಡಿಸುವುದಕ್ಕೆ ಸಚಿವ ಸುನಿಲ್ ಕುಮಾರ್ ಈಗಾಗಲೇ ಸೂಚನೆ ನೀಡಿದ್ದಾರೆ.

- Advertisement -
spot_img

Latest News

error: Content is protected !!