Friday, June 5, 2026
Homeಕರಾವಳಿಸೆಪ್ಟೆಂಬರ್ 2 ರಂದು ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಗುರುವಾಯನಕೆರೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಗುರುವಾಯನಕೆರೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪೂರ್ವಭಾವಿ ಸಭೆ

- Advertisement -
- Advertisement -

ಬೆಳ್ತಂಗಡಿ: ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಬೆಳ್ತಂಗಡಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪಾಲ್ಗೊಂಡಿದ್ದರು. ‌ಮಂಗಳೂರಿನ ಬಂಗ್ರಕೂಳೂರಿನಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಗವಹಿಸುವ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ, ನವ ಮಂಗಳೂರು ಬಂದರಿನಲ್ಲಿ ಸಾಗರಮಾಲಾ‌ ಯೋಜನೆ ಉದ್ಘಾಟಿಸಲಿದ್ದು, ನಂತರ ಬಂಗ್ರಕೂಳೂರಿನಲ್ಲಿ ನಡೆಯಲಿರುವ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ

- Advertisement -

Latest News

error: Content is protected !!