Thursday, June 25, 2026
Homeತಾಜಾ ಸುದ್ದಿಜುಲೈ 23ರಂದು 2024-25ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ

ಜುಲೈ 23ರಂದು 2024-25ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ

- Advertisement -
- Advertisement -

ನವದೆಹಲಿ : ಜುಲೈ 23ರಂದು 2024-25ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗಲಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ವಿತ್ತ ಸಚಿನೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ.

ಈ ಬಗ್ಗೆ ದಿನಾಂಕವನ್ನ ಕೇಂದ್ರ ಸಚಿವ ಕಿರಣ್ ರಿಜಿಜು,ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು,”ಗೌರವಾನ್ವಿತ ರಾಷ್ಟ್ರಪತಿಗಳು, ಭಾರತ ಸರ್ಕಾರದ ಶಿಫಾರಸಿನ ಮೇರೆಗೆ, 2024 ರ ಜುಲೈ 22 ರಿಂದ 2024 ರ ಆಗಸ್ಟ್ 12 ರವರೆಗೆ (ಸಂಸದೀಯ ವ್ಯವಹಾರದ ಅಗತ್ಯಗಳಿಗೆ ಒಳಪಟ್ಟು) 2024 ರ ಬಜೆಟ್ ಅಧಿವೇಶನಕ್ಕಾಗಿ ಸಂಸತ್ತಿನ ಉಭಯ ಸದನಗಳನ್ನು ಕರೆಯುವ ಪ್ರಸ್ತಾಪವನ್ನು ಅನುಮೋದಿಸಿದ್ದಾರೆ. 2024-25ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಜುಲೈ 23, 2024 ರಂದು ಲೋಕಸಭೆಯಲ್ಲಿ ಮಂಡಿಸಲಾಗುವುದು” ಎಂದಿದ್ದಾರೆ.

- Advertisement -

Latest News

error: Content is protected !!