Wednesday, June 24, 2026
HomeWorldಜಲಾಂತರಗಾಮಿ ನೌಕೆಯಲ್ಲಿ ಪ್ರಯಾಣಿಸಿ ಹೊಸ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು

ಜಲಾಂತರಗಾಮಿ ನೌಕೆಯಲ್ಲಿ ಪ್ರಯಾಣಿಸಿ ಹೊಸ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು

- Advertisement -
- Advertisement -

ರಾಷ್ಟ್ರಪತಿ ದ್ರೌಪದ ಮುರ್ಮು ಅವರು ಇಂದು ಕಾರವಾರದ ನೌಕಾ ನೆಲೆಯಲ್ಲಿ ಕೆಲ ಹೊತ್ತು ಪಯಣಿಸುವ ಮೂಲಕ ಜಲಾಂತರಗಾಮಿ ನೌಕೆಯಲ್ಲಿ ಪ್ರಯಾಣಿಸಿದ 2ನೇ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿ ಹೊಸ ದಾಖಲೆ ಬರೆದರು.

ಈ ಹಿಂದೆ ದಿ. ಎಪಿಜೆ ಅಬ್ದುಲ್ ಕಲಾಂ ಅವರು ಜಲಂತರ್ಗಾಮಿ ನೌಕೆಯಲ್ಲಿ ಪ್ರಯಾಣಿಸಿದ ಮೊಟ್ಟ ಮೊದಲ ರಾಷ್ಟ್ರಪತಿಯಾಗಿದ್ದರು.

ಸುಮಾರು ಹೊತ್ತು ಜಲಂತರಗಾಮಿ ನೌಕೆಯಲ್ಲಿ ಪ್ರಯಾಣಿಸಿದ ಅವರಿಗೆ ಕದಂಬ ನೌಕಾ ನೆಲೆಯ ಹಿರಿಯ ಅಧಿಕಾರಿಗಳು ಸಾಥ್ ನೀಡಿದರು.

ಈ ವೇಳೆ ಅವರು ನೌಕಾಪಡೆಯ ಕಾರ್ಯಕ್ಷಮತೆಯನ್ನು ವೀಕ್ಷಿಸಿದರು. ಅಲ್ಲದೆ ಅಧಿಕಾರಿಗಳಿಂದ ಅದರ ಬಗ್ಗೆ ಮಾಹಿತಿಗಳನ್ನು ಪಡೆದುಕೊಂಡರು. ಜಲಾಂತರಗಾಮಿ, ಭದ್ರತೆ, ಕಾರ್ಯಾಚರಣೆ ವ್ಯವಸ್ಥೆ ಬಗ್ಗೆಯೂ ಮರ್ಮು ಅವರು ನೌಕಾಪಡೆಯ ಮುಖ್ಯಸ್ಥರಿಂದ ವಿಷಯ ವಿನಿಮಯ ಮಾಡಿಕೊಂಡರು.

ರಾಷ್ಟ್ರಪತಿಗಳ ಭೇಟಿ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಆಂಕೋಲಾದವರೆಗೆ ಮೀನುಗಾರಿಕೆ ಚಟುವಟಿಕೆಗೆ ಜಿಲ್ಲಾಡಳಿತ ನಿಷೇಧ ಹೇರಿತ್ತು. ಬೆಳಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸುತ್ತಮುತ್ತಲ ಪ್ರದೇಶಗಳಲ್ಲಿ ಒಂದು ದಿನದ ಮಟ್ಟಿಗೆ ಮೀನುಗಾರಿಕೆಯನ್ನು ನಡೆಸದಂತೆ ಸೂಚನೆ ನೀಡಲಾಗಿತ್ತು. ಮಾಜಾಳಿಯಿಂದ ಕಾರವಾರದವರೆಗೆ ಶನಿವಾರ ರಾತ್ರಿಯಿಂದಲೇ ಒಂದೇ ಒಂದು ದೋಣಿಯೂ ಸಮುದ್ರಕ್ಕೆ ಇಳಿಯದಂತೆ ನಿರ್ಬಂಧ ಹಾಕಲಾಗಿತ್ತು. ಕದಂಬ ನೌಕಾ ನೆಲೆಯ ಸುತ್ತಮುತ್ತ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಹೈ ಅಲರ್ಟ್ ಘೋಷಿಸಲಾಗಿತ್ತು. ವಿಮಾನ ಮತ್ತು ಹೆಲಿಕಾಪ್ಟರ್ ಹಾರಾಟವನ್ನೂ ಸಹ ನಿಷೇಧಿಸಲಾಗಿತ್ತು. ಸಾರ್ವಜನಿಕರಿಗೂ ನಿರ್ಬಂಧ ವಿಧಿಸಲಾಗಿತ್ತು.

ಇದಕ್ಕೂ ಮುನ್ನ ಗೋವಾ ರಾಜಧಾನಿ ಪಣಜಿಯಿಂದ ಭಾರತೀಯ ವಾಯುಪಡೆಗೆ ಸೇರಿದ ವಿಶೇಷ ಹೆಲಿಕಾಪ್ಟರ್‌ನಲ್ಲಿ ಕದಂಬ ನೌಕೆ ನೆಲೆಗೆ ಆಗಮಿಸಿದ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಕಾರವಾರ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ, ನೌಕಾಪಡೆಯ ಸಿಬ್ಬಂದಿಗಳು ಹಾಗೂ ಜಿಲ್ಲಾಡಳಿತ ಆತ್ಮೀಯವಾಗಿ ಬರಮಾಡಿಕೊಂಡರು.

- Advertisement -

Latest News

error: Content is protected !!