Saturday, June 6, 2026
Homeತಾಜಾ ಸುದ್ದಿತಲ್ವಾರ್‌ ಹಿಡಿದು ಕೇಕ್‌ ಕತ್ತರಿಸಿದ ಯೂತ್‌ ಕಾಂಗ್ರೆಸ್‌ ಅಧ್ಯಕ್ಷ: ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್‌ ಪ್ರದರ್ಶನಕ್ಕೆ ಭಾರೀ...

ತಲ್ವಾರ್‌ ಹಿಡಿದು ಕೇಕ್‌ ಕತ್ತರಿಸಿದ ಯೂತ್‌ ಕಾಂಗ್ರೆಸ್‌ ಅಧ್ಯಕ್ಷ: ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್‌ ಪ್ರದರ್ಶನಕ್ಕೆ ಭಾರೀ ವಿರೋಧ ವ್ಯಕ್ತ

- Advertisement -
- Advertisement -

ಯಾದಗಿರಿ: ರಾಜಕೀಯ ಮುಖಂಡರು ಎಂದರೆ ಸಾಮಾಜಿಕ ಜವಾಬ್ದಾರಿ ಇರುವವರು ಅನ್ನೋದು ಯಾದಗಿರಿ ಕಾಂಗ್ರೆಸ್ ನಾಯಕರಿಗೆ ತಿಳಿದಿಲ್ಲ ಎನಿಸುತ್ತದೆ. ಮಾಜಿ ಶಾಸಕರ ಸಮ್ಮುಖದಲ್ಲಿಯೇ ಯೂತ್ ಕಾಂಗ್ರೆಸ್ ಅಧ್ಯಕ್ಷನೊಬ್ಬ ತಲ್ವಾರ್ ಪ್ರದರ್ಶಿಸಿದ ಘಟನೆ, ಯಾದಗಿರಿ ಜಿಲ್ಲೆಯ ಸುರಪುರ ನಗರದಲ್ಲಿ ನಡೆದಿದೆ..

ತಲ್ವಾರ್‌ನಿಂದ ಕೇಕ್ ಕತ್ತರಿಸಿ ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜಾ ಕುಮಾರ್ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದೀಗ ತಲ್ವಾರ್‌ನಿಂದ ಕೇಕ್ ಕತ್ತರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗ್ತಿದೆ. ಇದೇ ಮೇ 24 ರಂದು ರಾಜಾ ಕುಮಾರ್ ನಾಯಕ ಬರ್ತ್ ಡೇ ಇತ್ತು. ಸುರಪುರನಲ್ಲಿ ಅವರ ಅಭಿಮಾನಿ ಬಳಗದಿಂದ ಆಯೋಜಿಸಿದ್ದ ಅದ್ದೂರಿ ಹುಟ್ಟು ಹಬ್ಬದ ಆಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಹುಟ್ಟು ಹಬ್ಬ ಆಚರಿಸಿಕೊಂಡ ಯೂತ್ ಕಾಂಗ್ರೆಸ್ ಅಧ್ಯಕ್ಷ ರಾಜಾ ಕುಮಾರ್, ತಲ್ವಾರ್‌ನಿಂದ ಕೇಕ್ ಕತ್ತರಿಸಿದ್ದರು. ಇದೀಗ ಈ ವಿಚಾರ ವಿವಾದಕ್ಕೆ ಗುರಿಯಾಗಿದೆ.

ಎಲ್ಲಕ್ಕಿಂತ ಹೆಚ್ಚಾಗಿ ಸುರಪುರ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಸಮ್ಮುಖದಲ್ಲಿಯೇ ತಲ್ವಾರ್ ಪ್ರದರ್ಶನ ಮಾಡಲಾಗಿದ್ದು, ಭಾರೀ ಜನಾಕ್ರೋಶಕ್ಕೆ ಕಾರಣವಾಗಿದೆ. ಜನಪ್ರತಿನಿಧಿಗಳು, ರಾಜಕೀಯ ನಾಯಕರು ಎಂದರೆ ಇತರರಿಗೆ ಮಾದರಿಯಾಗಬೇಕು. ಆದರೆ, ಒಂದು ಆ್ಯಪ್‌ನಲ್ಲಿ ಓದಿ ಪಕ್ಷದ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದುಕೊಂಡೇ ಈ ರೀತಿ ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಪ್ರದರ್ಶನ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂಬ ವಿಚಾರ ಸ್ಥಳೀಯ ಬಿಜೆಪಿ ನಾಯಕರ ಹಾಗೂ ಸಾರ್ವಜನಿಕರ ಆಕ್ರೋಶವಾಗಿದೆ.

- Advertisement -

Latest News

error: Content is protected !!