- Advertisement -
- Advertisement -
ಬೆಂಗಳೂರು: ನಾಳೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಎರಡು ದಿನಗಳ ಪ್ರವಾಸದಲ್ಲಿ ಬೆಂಗಳೂರಿನಲ್ಲಿ ಎರಡು ಕಾರ್ಯಕ್ರಮದಲ್ಲಿ ರಾಮನಾಥ್ ಕೋವಿಂದ್ ಭಾಗವಹಿಸಲಿದ್ದಾರೆ.
ನಾಳೆ ಬೆಳಗ್ಗೆ 11.40ಕ್ಕೆ ಬೆಂಗಳೂರಿನ ಹೆಚ್ ಎಎಲ್ ಏರ್ ಪೋರ್ಟ್ ಗೆ ವಿಶೇಷ ವಿಮಾನದ ಮೂಲಕ ಆಗಮಿಸಲಿರುವ ರಾಷ್ಟ್ರಪತಿಯವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಲಿದ್ದಾರೆ.
ನಾಳೆ ಸಂಜೆ ಬೆಂಗಳೂರಿನ ರಾಷ್ಟ್ರೀಯ ಮಿಲಿಟರಿ ಸ್ಕೂಲ್ ನ ಅಮೃತ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಲಿರುವ ರಾಷ್ಟ್ರಪತಿ ನಾಳೆ ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಮಂಗಳವಾರ ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ವೈಕುಂಠ ಬೆಟ್ಟದಲ್ಲಿ ಇಸ್ಕಾನ್ ವತಿಯಿಂದ ತಿರುಮಲ ತಿರುಪತಿ ದೇವಸ್ಥಾನದ ಮಾದರಿಯ ರಾಧಾಕೃಷ್ಣ ದೇವಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ರಾಷ್ಟ್ರಪತಿಗಳು ದೆಹಲಿಗೆ ನಿರ್ಗಮಿಸಲಿದ್ದಾರೆ.
- Advertisement -