Thursday, June 4, 2026
Homeತಾಜಾ ಸುದ್ದಿರಾಷ್ಟ್ರಪತಿ ಚುನಾವಣೆ ದಿನಾಂಕ ಪ್ರಕಟ: ಜುಲೈ 18ರಂದು ಎಲೆಕ್ಷನ್

ರಾಷ್ಟ್ರಪತಿ ಚುನಾವಣೆ ದಿನಾಂಕ ಪ್ರಕಟ: ಜುಲೈ 18ರಂದು ಎಲೆಕ್ಷನ್

- Advertisement -
- Advertisement -

ನವದೆಹಲಿ : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ಕ್ಕೆ ಕೊನೆಗೊಳ್ಳಲಿದ್ದು, ರಾಷ್ಟ್ರಪತಿ ಚುನಾವಣೆಯ ದಿನಾಂಕವನ್ನ ಚುನಾವಣಾ ಆಯೋಗ ಪ್ರಕಟಿಸಿದೆ.

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದು, ಇದೇ ಜುಲೈ 18ರಂದು ಚುನಾವಣೆ ನಡೆಸಲಾಗುವುದು ಎಂದು ಪ್ರಕಟಿಸಿದರು. ಹೌದು, ಚುನಾವಣಾ ಆಯೋಗ (ಇಸಿಐ) ದೇಶದಲ್ಲಿ 15ನೇ ಅಧ್ಯಕ್ಷೀಯ ಚುನಾವಣೆಯನ್ನ ಘೋಷಿಸಿದೆ.

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಪ್ರಕಾರ, ಜುಲೈ 18 ರಂದು ರಾಷ್ಟ್ರಪತಿ ಚುನಾವಣೆಗೆ ಮತದಾನ ನಡೆಯಲಿದೆ. ಇದೇ ವೇಳೆ ಜೂನ್ 15ರಂದು ಅಧಿಸೂಚನೆ ಹೊರಡಿಸಲಾಗುವುದು. ನಾಮನಿರ್ದೇಶನಕ್ಕೆ ಕೊನೆಯ ದಿನಾಂಕ ಜೂನ್ 29 ಆಗಿದೆ. ಜುಲೈ 18 ರಂದು ಮತದಾನ ನಡೆಯಲಿದ್ದು, ಜುಲೈ 21 ರಂದು ಮತ ಎಣಿಕೆ ನಡೆಯಲಿದೆ.

- Advertisement -

Latest News

error: Content is protected !!