- Advertisement -
- Advertisement -
ಮಂಗಳೂರು: ಮಂಗಳೂರಿನ ಕಸ್ತೂರಬಾ ಮೆಡಿಕಲ್ ಕಾಲೇಜಿನ ಖ್ಯಾತ ಮೂತ್ರಶಾಸ್ತ್ರಜ್ಞರಾಗಿದ್ದ ದಿ. ಡಾ. ಜಿ.ಜಿ. ಲಕ್ಷ್ಮಣ ಪ್ರಭು ಅವರಿಗೆ ಮರಣೋತ್ತರ ಪ್ರೆಸಿಡೆಂಟ್ಸ್ ಅವಾರ್ಡ್ ಆಫ್ ಮೆರಿಟ್ ಲಭಿಸಿದೆ.
ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಪರೀಕ್ಷಾ ಮಂಡಳಿಯ 22ನೇ ಘಟಿಕೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರಧಾನ ಮಾಡಿದರು.
ದಿ. ಲಕ್ಷ್ಮಣ ಪ್ರಭು ಅವರ ಪತ್ನಿ ಶ್ರೀಮತಿ ಕವಿತಾ ಪ್ರಭು ರಾಷ್ಟ್ರಪತಿಗಳಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.ವೈದ್ಯಕೀಯ ವೃತ್ತಿಯಲ್ಲಿ 36 ವರ್ಷಗಳ ಸುದೀರ್ಘ ಅನುಭವ ಹೊಂದಿದ್ದ ದಿ. ಡಾ. ಲಕ್ಷ್ಮಣ ಪ್ರಭು ಅವರು ಮಂಗಳೂರು ಕೆಎಂಸಿಯ ಮೂತ್ರಾಂಗ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.
ಅಲ್ಲದೇ, ಹಲವು ಸಂಕೀರ್ಣ ವೈದ್ಯಕೀಯ ಪ್ರಕರಣಗಳನ್ನು ಕೂಡಾ ಲಕ್ಷ್ಮಣ ಪ್ರಭು ಯಶಸ್ವಿಯಾಗಿ ನಿರ್ವಹಿಸಿದ್ದರು
- Advertisement -