Thursday, June 4, 2026
Homeತಾಜಾ ಸುದ್ದಿವಿಟ್ಲ ಪಟ್ಟಣ ಪಂಚಾಯತ್ ಚುನಾವಣೆಯ ಪ್ರಯುಕ್ತ ಬಿಜೆಪಿ ಕಾರ್ಯಲಯದಲ್ಲಿ ಪತ್ರಿಕಾಗೋಷ್ಠಿ

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆಯ ಪ್ರಯುಕ್ತ ಬಿಜೆಪಿ ಕಾರ್ಯಲಯದಲ್ಲಿ ಪತ್ರಿಕಾಗೋಷ್ಠಿ

- Advertisement -
- Advertisement -

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು ಈಗಾಗಲೇ ಬಿಜೆಪಿ ಪಾಳಯ 18 ವಾರ್ಡ್ಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಹೀಗಾಗಿ ಇಂದು ವಿಟ್ಲ ಬಿಜೆಪಿ ಕಾರ್ಯಲಯದಲ್ಲಿ ಪತ್ರಿಕಾಗೋಷ್ಠಿ ನಡೆಯಿತು.

ಕಳೆದ ಬಾರಿಯ ನಮ್ಮ ಪ್ರಣಾಳಿಕೆಯಲ್ಲಿ ಹೆಚ್ಚಿನವುಗಳನ್ನು ಅನುಷ್ಠಾನಗೊಳಿಸಲಾಗಿದ್ದು, ಈ ಬಾರಿಯೂ ಕೂಡಾ ಬಿಜೆಪಿಯ ಎಲ್ಲಾ 18 ಅಭ್ಯರ್ಥಿಗಳನ್ನು ಬಹುಮತದಿಂದ ಗೆಲ್ಲಿಸಿಕೊಟ್ಟಲ್ಲಿ ಭ್ರಷ್ಟಚಾರ ಮುಕ್ತ ಆಡಳಿತ ಮತ್ತು ವಿಟ್ಲವನ್ನು ಒಂದು ಸರ್ವಾಂಗ ಸುಂದರ ನಗರವನ್ನಾಗಿ ಪರಿವರ್ತಿಸಲಾಗುವುದು ಎಂದು ಈ ಪತ್ರಿಕಾಗೋಷ್ಟಿಯಲ್ಲಿ ಭರವಸೆ ವ್ಯಕ್ತ ಪಡೆಸಿದರು.

ಈ ಸಂದರ್ಭದಲ್ಲಿ ದ.ಕ ಜಿಲ್ಲೆಯ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ರಾಮ್‌ದಾಸ್ ಬಂಟ್ವಾಳ ಬಿಜೆಪಿ ಮಂಡಲ ಅಧ್ಯಕ್ಷ ಸಾಜಾ ರಾಧಕೃಷ್ಣ ಆಳ್ವ, ವಿಟ್ಲ ಪಟ್ಟಣ ಪಂಚಾಯತ್‌ನ ಬಿಜೆಪಿ ಚುಣಾವಣಾ ಪುಮುಖ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮಂಗ್ಲಿಮನೆ, ನಿತೀಶ್ ಶಾಂತಿವನ, ಉಪಾಧ್ಯಕ್ಷ ಮುಕುಂದ ಬಜತ್ತುರು, ವಿಟ್ಲ ಪಟ್ಟಣ ಪಂಚಾಯತ್ ನ ಮಾಜಿ ಅಧ್ಯಕ್ಷ ಹಾಗೂ 11ನೇ ವಾರ್ಡ್ನ ಅಭ್ಯರ್ಥಿ ಅರುಣ್ ವಿಟ್ಲ, ಬಿಜೆಪಿ ಪಕ್ಷದ ಮಾಧ್ಯಮ ಪ್ರಮುಖ ದಯಾನಂದ ಉಜಿರೆಮಾರ್‌ ಹಾಗೂ ಹಲವರು ಉಪಸ್ಥಿತರಿದ್ದರು.

- Advertisement -

Latest News

error: Content is protected !!