Thursday, June 4, 2026
Homeಕರಾವಳಿಕಡಬ; ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು, ದೈವ ನರ್ತಕ ಸಾವು

ಕಡಬ; ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು, ದೈವ ನರ್ತಕ ಸಾವು

- Advertisement -
- Advertisement -

ಕಡಬ; ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ ಸಾವನ್ನಪ್ಪಿರುವ ಘಟನೆ ಮಾ.30 ರಂದು ಕಡಬ ಸಮೀಪದ ಎಡಮಂಗಲದಲ್ಲಿ ನಡೆದಿದೆ.

ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿ ಮೃತ ದುರ್ದೈವಿ. ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಅವರು ಸೇವೆ ಸಲ್ಲಿಸುತ್ತಿದ್ದರು.

ಮಾ.30 ರಂದು ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ನಡೆಯುತ್ತಿತ್ತು.ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದರೂ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ.

- Advertisement -

Latest News

error: Content is protected !!