Sunday, February 16, 2025
Homeಉತ್ತರ ಕನ್ನಡಪದ್ಮಶ್ರೀ ಪ್ರಶಸ್ತಿ ಪುರಸ್ಕ್ರತ ಪರಿಸರ ಪ್ರೇಮಿ ತುಳಸಿಗೌಡ ನಿಧನಕ್ಕೆ ಕನ್ನಡದಲ್ಲೇ ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ಪದ್ಮಶ್ರೀ ಪ್ರಶಸ್ತಿ ಪುರಸ್ಕ್ರತ ಪರಿಸರ ಪ್ರೇಮಿ ತುಳಸಿಗೌಡ ನಿಧನಕ್ಕೆ ಕನ್ನಡದಲ್ಲೇ ಸಂತಾಪ ಸೂಚಿಸಿದ ಪ್ರಧಾನಿ ಮೋದಿ

spot_img
- Advertisement -
- Advertisement -

ನವದೆಹಲಿ; ಪದ್ಮಶ್ರೀ ಪ್ರಶಸ್ತಿ ಪುರಸ್ಕ್ರತ ಪರಿಸರ ಪ್ರೇಮಿ ತುಳಸಿಗೌಡ ನಿಧನಕ್ಕೆ ಕನ್ನಡದಲ್ಲೇ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

ಎಕ್ಸ್ ನಲ್ಲಿ  ತುಳಸಿ ಗೌಡ ಅವರೊಂದಿಗಿರುವ ಫೋಟೋ ಶೇರ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ತುಳಸಿ ಗೌಡ ಅವರ ನಿಧನ ತೀವ್ರ ದುಃಖ ತಂದಿದೆ. ಅವರು ತಮ್ಮ ಇಡೀ ಬದುಕನ್ನು ಪ್ರಕೃತಿ ಪೋಷಣೆಗಾಗಿ ಮುಡಿಪಾಗಿಟ್ಟು, ಸಾವಿರಾರು ಗಿಡಗಳನ್ನು ನೆಟ್ಟು ಬೆಳೆಸಿ ನಮ್ಮ ಪರಿಸರವನ್ನು ಸಂರಕ್ಷಿಸಿದವರು. ಪರಿಸರ ರಕ್ಷಣೆಗೆ ಸದಾ ಮಾರ್ಗದರ್ಶನ ನೀಡುವ ಬೆಳಕಾಗಿ ಅವರು ಉಳಿಯುತ್ತಾರೆ. ಅವರ ಕೆಲಸಗಳು ನಮ್ಮ ಭೂಗ್ರಹವನ್ನು ರಕ್ಷಿಸಲು ತಲೆಮಾರುಗಳಿಗೆ ಪ್ರೇರಣೆ ನೀಡುತ್ತಿರುತ್ತವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ. ಎಂದು ಬರೆದಿದ್ದಾರೆ.

- Advertisement -
spot_img

Latest News

error: Content is protected !!