Friday, November 13, 2026
Homeರಾಜಕೀಯಬೆಂಗಳೂರಿನ ಪಿಂಕ್‌ ಲೈನ್‌ ಮೆಟ್ರೋಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಬೆಂಗಳೂರಿನ ಪಿಂಕ್‌ ಲೈನ್‌ ಮೆಟ್ರೋಗೆ ಚಾಲನೆ ನೀಡಿದ ಪ್ರಧಾನಿ ಮೋದಿ

- Advertisement -
- Advertisement -

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಾವರೆಕೆರೆ (ಎಸ್.ಜಿ. ಪಾಳ್ಯ) ಮೆಟ್ರೋ ನಿಲ್ದಾಣದಲ್ಲಿ ನಮ್ಮ ಮೆಟ್ರೋದ ಪಿಂಕ್ ಲೈನ್‌ನ ಮೊದಲ ಹಂತಕ್ಕೆ ಚಾಲನೆ ನೀಡಿದರು. ಕಾಳೇನ ಅಗ್ರಹಾರದಿಂದ ನಾಗಾವರದವರೆಗೆ ಎರಡು ಹಂತಗಳಲ್ಲಿ ನಿರ್ಮಾಣವಾಗುತ್ತಿರುವ ಪಿಂಕ್ ಲೈನ್‌ನ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದೆ.

ಮೆಟ್ರೋಗೆ ಚಾಲನೆ ನೀಡಿದ ಬಳಿಕ ಪ್ರಧಾನಿ ಮೋದಿ ಅವರು ಆರು ಬೋಗಿಗಳ ರೈಲಿನಲ್ಲಿ ಪ್ರಯಾಣ ಬೆಳೆಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಹಾಗೂ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಹಲವು ಗಣ್ಯರು ಅವರೊಂದಿಗೆ ಪ್ರಯಾಣಿಸಿದರು. ಪ್ರಧಾನಿ ಕಚೇರಿಯ ಅಧಿಕಾರಿಗಳು ಹಾಗೂ ರಾಜ್ಯದ ಹಿರಿಯ ಅಧಿಕಾರಿಗಳೂ ರೈಲಿನಲ್ಲಿ ಉಪಸ್ಥಿತರಿದ್ದರು.

ಎಸ್.ಜಿ. ಪಾಳ್ಯ ಮೆಟ್ರೋ ನಿಲ್ದಾಣದಿಂದ ಪ್ರಯಾಣ ಆರಂಭಿಸಿದ ಪ್ರಧಾನಿ ಮೋದಿ ಅವರು ಬಿಳೇಕಹಳ್ಳಿ (ಐಐಎಂಬಿ) ಮೆಟ್ರೋ ನಿಲ್ದಾಣದಲ್ಲಿ ಇಳಿದರು. ಬಳಿಕ ಅಲ್ಲಿಂದ ಐಐಎಂಬಿ ಸಭಾಂಗಣಕ್ಕೆ ತೆರಳಲಿದ್ದು, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಇದೇ ವೇಳೆ ಐಐಎಂಬಿ ಸಭಾಂಗಣದ ಆವರಣದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ್ದರು. ಕೆಲ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಗಾಂಧಿ ಹಾಗೂ ಡಿ.ಕೆ. ಶಿವಕುಮಾರ್ ಪರ ಘೋಷಣೆಗಳನ್ನು ಕೂಗಿದರು.

- Advertisement -

Latest News

error: Content is protected !!