Tuesday, June 23, 2026
Homeತಾಜಾ ಸುದ್ದಿಲೋಕಸಭಾ ಚುನಾವಣೆ 2024; ಆಂಧ್ರಪ್ರದೇಶದಲ್ಲಿ ಪ್ರಧಾನಿ ಮೋದಿಯ ಮೊದಲ ರ್‍ಯಾಲಿ

ಲೋಕಸಭಾ ಚುನಾವಣೆ 2024; ಆಂಧ್ರಪ್ರದೇಶದಲ್ಲಿ ಪ್ರಧಾನಿ ಮೋದಿಯ ಮೊದಲ ರ್‍ಯಾಲಿ

- Advertisement -
- Advertisement -

2024ರ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಭಾನುವಾರ) ಸಂಜೆ ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ಮೊದಲ ಚುನಾವಣಾ ರ್‍ಯಾಲಿ ಆರಂಭಿಸಲಿದ್ದಾರೆ ಎಂದು ತಿಳಿದು ಬಂದಿದೆ. 

ಪ್ರಧಾನಿ ನರೇಂದ್ರ ಮೋದಿ ಅವರು ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರೊಂದಿಗೆ ವೇದಿಕೆ ಹಂಚಿಕೊಳ್ಳಲಿದ್ದು, ಇದೇ ಮೊದಲು ಈ ಮೂವರೂ ನಾಯಕರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

‘ಪ್ರಜಾಗಳಂ’ ಎಂದು ಹೆಸರಿಸಲಾಗಿರುವ ಈ ರ್‍ಯಾಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಆಂಧ್ರಪ್ರದೇಶದಲ್ಲಿ ನಡೆಯುತ್ತಿರುವ ಎನ್‌ಡಿಎ ಮೈತ್ರಿಕೂಟದ ಮೊದಲ ಸಾರ್ವಜನಿಕ ಸಭೆಯಾಗಿದೆ.

‘ಆಂಧ್ರಪ್ರದೇಶದ ಉಜ್ವಲ ಭವಿಷ್ಯಕ್ಕಾಗಿ ಕ್ರೂರ ರಾಜಕಾರಣವನ್ನು ಅಂತ್ಯಗೊಳಿಸುವ ಗುರಿಯನ್ನು ಪ್ರಜಾಗಳಂ ಹೊಂದಿದೆ‘ ಎಂದು ಜನಸೇನೆ ಹೇಳಿದೆ. ಸಭೆಯಲ್ಲಿ ಟಿಡಿಪಿ, ಜನಸೇನಾ ಮತ್ತು ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆಯಿದೆ.

- Advertisement -

Latest News

error: Content is protected !!