ಬ್ರೆಸಿಲಿಯಾ: ಪ್ರಧಾನಿ ನರೇಂದ್ರ ಮೋದಿ ಅವರು ಬ್ರೆಜಿಲ್ ದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಗ್ರ್ಯಾಂಡ್ ಕಾಲರ್ ಆಫ್ ದಿ ನ್ಯಾಷನಲ್ ಆರ್ಡರ್ ಆಫ್ ದಿ ಸದರ್ನ್ ಕ್ರಾಸ್ ಪ್ರಶಸ್ತಿ ಪ್ರದಾನಿಸಿ ಗೌರವಿಸಲಾಯಿತು.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಪ್ರಶಸ್ತಿಯನ್ನುಬ್ರೆಜಿಲ್ ಅಧ್ಯಕ್ಷ ಲೂಯಿಸ್ ಇನಾಸಿಯೊ ಲುಲಾ ಡ ಸಿಲ್ವಾ ಅವರು ಬ್ರೆಸಿಲಿಯಾದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಪ್ರದಾನ ಮಾಡಿದ್ದು, ಮೋದಿ ಅವರು ಮೇ 2014ರಲ್ಲಿ ಪ್ರಧಾನಿಯಾದ ನಂತರ ವಿವಿಧ ದೇಶಗಳಿಂದ ಸಿಕ್ಕ 26ನೇ ಅಂತರಾಷ್ಟ್ರೀಯ ಪ್ರಶಸ್ತಿ ಇದಾಗಿದೆ.
ಇನ್ನು ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಮೋದಿ ಅವರು, ʻಈ ಪ್ರಶಸ್ತಿಯನ್ನು ಸ್ವೀಕರಿಸಿದ್ದು ಇಂದು ನನಗೆ ಮಾತ್ರವಲ್ಲ, 140 ಕೋಟಿ ಭಾರತೀಯರಿಗೂ ಹೆಮ್ಮೆಯ ಮತ್ತು ಭಾವನಾತ್ಮಕ ಕ್ಷಣವಾಗಿದೆ. ಅಧ್ಯಕ್ಷ ಲುಲಾ ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಏಕೆಂದರೆ ನನಗೆ ಬ್ರೆಜಿಲ್‌ನ ಅತ್ಯುನ್ನತ ನಾಗರಿಕ ಗೌರವವನ್ನು ನೀಡಲಾಗಿದೆ. ನಾನು ಬ್ರೆಜಿಲ್ ಸರ್ಕಾರ ಮತ್ತು ಬ್ರೆಜಿಲ್ ಜನರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ,ʼ ಎಂದು ಹೇಳಿದ್ದಾರೆ.