Thursday, July 16, 2026
Homeಕರಾವಳಿಜುಲೈ 17ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ನವೀಕೃತ ರೈಲು ನಿಲ್ದಾಣದ ಉದ್ಘಾಟನೆ

ಜುಲೈ 17ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ನವೀಕೃತ ರೈಲು ನಿಲ್ದಾಣದ ಉದ್ಘಾಟನೆ

- Advertisement -
- Advertisement -

ಬಂಟ್ವಾಳ: ಅಮೃತ ಭಾರತ ಯೋಜನೆಯಡಿ ಸುಮಾರು 26.18 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಭವ್ಯವಾಗಿ ಮರುನಿರ್ಮಾಣಗೊಂಡಿರುವ ಬಂಟ್ವಾಳ ರೈಲು ನಿಲ್ದಾಣದ ಉದ್ಘಾಟನಾ ಸಮಾರಂಭವು ಜುಲೈ 17ರಂದು ನಡೆಯಲಿದೆ.

ಅಂದು ಅಪರಾಹ್ನ 3:40ಕ್ಕೆ ರೈಲು ನಿಲ್ದಾಣದ ಆವರಣದಲ್ಲಿ ಆಯೋಜಿಸಲಾಗಿರುವ ಈ ಕಾರ್ಯಕ್ರಮದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನೂತನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

ಈ ವಿಶೇಷ ಸಮಾರಂಭದಲ್ಲಿ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸೇರಿದಂತೆ ಹಲವು ಗಣ್ಯರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ರೈಲ್ವೆ ಇಲಾಖೆಯ ಅಧಿಕೃತ ಪ್ರಕಟಣೆ ತಿಳಿಸಿದೆ.

- Advertisement -

Latest News

error: Content is protected !!