Sunday, June 23, 2024
Homeಕರಾವಳಿಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಶ್ಲಾಘನೆ

ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಶ್ಲಾಘನೆ

spot_img
- Advertisement -
- Advertisement -

ನವದೆಹಲಿ: ಸ್ವಾತಂತ್ರ್ಯ ಅಮೃತ‌‌ ಮಹೋತ್ಸವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಆಯೋಜಿಸಿರುವ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮವನ್ನು ಪ್ರಧಾನಮಂತ್ರಿ ‌ನರೇಂದ್ರ ಮೋದಿ ಪ್ರಶಂಸಿದ್ದಾರೆ.

ಇಂದಿನ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಉಲ್ಲೇಖಿಸಿದ ಪ್ರಧಾನಿ ಮೋದಿ, ಕರ್ನಾಟಕದಲ್ಲಿ ಅಮೃತ ಮಹೋತ್ಸವಕ್ಕೆ ಸಂಬಂಧಪಟ್ಟಂತೆ ಉತ್ತಮ ಕಾರ್ಯಕ್ರಮ ನಡೆಯುತ್ತಿದೆ ಎಂದು ಶ್ಲಾಘಿಸಿದ್ದಾರೆ.

ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮ‌ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್ ಪರಿಕಲ್ಪನೆಯಲ್ಲಿ ಮೂಡಿ ಬಂದಿದೆ.

ಕಳೆದ ಮೂರು ತಿಂಗಳಿಂದ ರಾಜ್ಯದಲ್ಲಿ ಸಾಂಸ್ಕ್ರತಿಕ ಹಾಗೂ ಸ್ವಾತಂತ್ರ್ಯ ಹೋರಾಟದ ಕುರಿತು ಜಾಗೃತಿ ಕಾರ್ಯಕ್ರಮವಾಗಿ ನಡೆಯುತ್ತಿದ್ದು, ಆಗಸ್ಟ್ ಎರಡನೇ ವಾರದಲ್ಲಿ ಸಮಾರೋಪಗೊಳ್ಳಲಿದೆ.

- Advertisement -
spot_img

Latest News

error: Content is protected !!