Wednesday, July 2, 2025
Homeತಾಜಾ ಸುದ್ದಿನಾಳೆಯಿಂದ ಎರಡು ದಿನಗಳ ಕಾಲ ಪ್ರಧಾನಿ ಮೋದಿ ರಾಜ್ಯ ಪ್ರವಾಸ

ನಾಳೆಯಿಂದ ಎರಡು ದಿನಗಳ ಕಾಲ ಪ್ರಧಾನಿ ಮೋದಿ ರಾಜ್ಯ ಪ್ರವಾಸ

spot_img
- Advertisement -
- Advertisement -

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ನಾಳೆಯಿಂದ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಬೆಂಗಳೂರು ಮತ್ತು ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ನಾಳೆ ಮಧ್ಯಾಹ್ನ 12.30 ಕ್ಕೆ ಪ್ರಧಾನಿ ಮೋದಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಮಿದುಳು ಸಂಶೋಧನಾ ಕೇಂದ್ರ ಲೋಕಾರ್ಪಣೆಗೊಳಿಸಿ ಬಾಗ್ಚಿ- ಪಾರ್ಥಸಾರಥಿ ಆಸ್ಪತ್ರೆಯ ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ. ಮಧ್ಯಾಹ್ನ 1.45 ಕ್ಕೆ ಪ್ರಧಾನಿಯವರು ಬೇಸ್ ಕ್ಯಾಂಪಸ್ ಗೆ ತೆರಳಿ, ಡಾ:ಬಿ.ಆರ್.ಅಂಬೇಡ್ಕರ್ ಕಂಚಿನ ಪುತ್ಥಳಿ ಅನಾವರಣ, ಡಾ:ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಕ್ಯಾಂಪಸ್ ಉದ್ಘಾಟನೆ ಹಾಗೂ ಮೇಲ್ದರ್ಜೆಗೇರಿಸಿದ 150 ಐಟಿಐಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಮಧ್ಯಾಹ್ನ 2.45 ಕ್ಕೆ ಬೆಂಗಳೂರಿನ ಕೊಮ್ಮಘಟ್ಟದಲ್ಲಿ ಸಬ್ ಅರ್ಬನ್ ರೈಲು ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆಗೊಳಿಸಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮೈಸೂರಿಗೆ ತೆರಳಿದ್ದಾರೆ.

ನಾಳೆ‌ ಸಂಜೆ 5.30 ಕ್ಕೆ ಮೈಸೂರಿನ ಮಹಾರಾಜ ಮೈದಾನಕ್ಕೆ ಆಗಮಿಸಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಂದು ರಾತ್ರಿ 7 ಗಂಟೆಗೆ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ರಾತ್ರಿ 7.50 ಕ್ಕೆ ಮೈಸೂರಿನ ಚಾಮುಂಡಿಬೆಟ್ಟಕ್ಕೆ ತೆರಳಿ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.

ಜೂನ್ 21 ರಂದು ಮಂಗಳವಾರ ಬೆಳಿಗ್ಗೆ 6.30 ಕ್ಕೆ ಪ್ರಧಾನಿ ಮೋದಿಯವರು ಮೈಸೂರು ಅರಮನೆಯ ಮೈದಾನದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ಯೋಗಪಟುಗಳೊಂದಿಗೆ ಬೆರೆತು ಯೋಗ ಮಾಡಲಿದ್ದಾರೆ.

ಬೆಳಿಗ್ಗೆ 8.10 ಕ್ಕೆ ವಸ್ತುಪ್ರದರ್ಶನ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ನಂತರ ಬೆಳಿಗ್ಗೆ 9.20 ಕ್ಕೆಮೈಸೂರು ಅರಮನೆ ಆವರಣದಿಂದ ನಿರ್ಗಮಿಸಿ ಬೆಳಿಗ್ಗೆ 9.45ಕ್ಕೆ ಮೈಸೂರಿನ ವಿಮಾನನಿಲ್ದಾಣದಿಂದ ನವದೆಹಲಿಗೆ ತೆರಳಲಿದ್ದಾರೆ.

- Advertisement -
spot_img

Latest News

error: Content is protected !!