Friday, June 27, 2025
Homeತಾಜಾ ಸುದ್ದಿಮೋದಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಬಾಂಗ್ಲಾ, ನೇಪಾಳ ಪ್ರಧಾನಿ, ಲಂಕಾ ಅಧ್ಯಕ್ಷರು

ಮೋದಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಬಾಂಗ್ಲಾ, ನೇಪಾಳ ಪ್ರಧಾನಿ, ಲಂಕಾ ಅಧ್ಯಕ್ಷರು

spot_img
- Advertisement -
- Advertisement -

ಹೊಸದಿಲ್ಲಿ: ಎನ್ ಡಿಎ ಒಕ್ಕೂಟ ಸರ್ಕಾರ ರಚನೆಗೆ ಮುಂದಾಗಿದ್ದು, ಜೂನ್ 8 ರಂದು ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು ಶ್ರೀಲಂಕಾದ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರು ಆಗಮಿಸಲಿದ್ದಾರೆ. ಅವರೊಂದಿಗೆ ನೇಪಾಳ ಪ್ರಧಾನಿ ಪುಷ್ಪ ಕುಮಾರ್ ದಹಾಲ್ ಮತ್ತು ಭೂತಾನ್ ದೊರೆ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್‌ಚುಕ್ ಕೂಡ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನಾಥ್ ಅವರನ್ನೂ ಆಹ್ವಾನಿಸುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

2019 ರ ಲೋಕಸಭಾ ಚುನಾವಣೆಯ ನಂತರ, ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ಭಾರತವು ಬಿಮ್ಸ್ಟೆಕ್ ರಾಷ್ಟ್ರಗಳ ನಾಯಕರನ್ನು ಆಹ್ವಾನಿಸಿತು. BIMSTEC, ಒಂದು ಪ್ರಾದೇಶಿಕ ಗುಂಪು. ಇದು ಬಾಂಗ್ಲಾದೇಶ, ಭೂತಾನ್, ಭಾರತ, ಮ್ಯಾನ್ಮಾರ್, ನೇಪಾಳ, ಶ್ರೀಲಂಕಾ ಮತ್ತು ಥೈಲ್ಯಾಂಡ್ ಅನ್ನು ಒಳಗೊಂಡಿದೆ. 2019 ರಲ್ಲಿ ವಿವಿಐಪಿಗಳು ಸೇರಿದಂತೆ ಸುಮಾರು 8,000 ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

- Advertisement -
spot_img

Latest News

error: Content is protected !!