Saturday, June 13, 2026
Homeಕರಾವಳಿಮಂಗಳೂರಿನ ಸ್ವಾಗತಕ್ಕೆ ಟ್ವಿಟರ್ ನಲ್ಲಿ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ

ಮಂಗಳೂರಿನ ಸ್ವಾಗತಕ್ಕೆ ಟ್ವಿಟರ್ ನಲ್ಲಿ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ

- Advertisement -
- Advertisement -

ನವದೆಹಲಿ: ನಿನ್ನೆ ಮಂಗಳೂರಿಗೆ ಬಂದು ಹೋಗಿದ್ದ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಸಿಕ್ಕಿದ ಅಭೂತಪೂರ್ವ ಸ್ವಾಗತಕ್ಕೆ ಇಂದು ಸಂತಸ ವ್ಯಕ್ತಪಡಿಸಿದ್ದಾರೆ.

ಮಂಗಳೂರು ಭೇಟಿ ಬಗ್ಗೆ ಇಂದು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಮಂಗಳೂರಿನ ಜನತೆಗೆ ಧನ್ಯವಾದ ಹೇಳಿದ್ದಾರೆ.

ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ. ಪ್ರಮುಖ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದುದು ಸಂತಸ ತಂದಿದೆ ಎಂದು ಟ್ವಿಟ್ಟರ್ ನಲ್ಲಿ ಕನ್ನಡದಲ್ಲಿ ಮೋದಿ ಬರೆದುಕೊಂಡಿದ್ದಾರೆ.

ಇದೇ ವೇಳೆ ರಸ್ತೆಯ ಇಕ್ಕೆಲಗಳಲ್ಲಿ ಜನರು ಮೋದಿ ಕಾರಿನಲ್ಲಿ ಬರುವಾಗ ಹರ್ಷೋದ್ಘಾರಗಳೊಂದಿಗೆ ಸ್ವಾಗತಿಸಿದ ಫೋಟೋಗಳನ್ನು ಕೂಡಾ ಮೋದಿ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ನಿನ್ನೆ ಮಧ್ಯಾಹ್ನ ಮಂಗಳೂರಿನ ಬಂಗ್ರಕೂಳೂರಿನಲ್ಲಿ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ 3800 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರೆವೇರಿಸಿದ್ದರು.

- Advertisement -

Latest News

error: Content is protected !!