Friday, June 26, 2026
Homeಕರಾವಳಿಉಡುಪಿಯ ಅಮೃತ್ ಗಾರ್ಡನ್‌ನಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಅಪ್ರೆಂಟಿಶಿಪ್ ಹಾಗೂ ಉದ್ಯೋಗ ಮೇಳ

ಉಡುಪಿಯ ಅಮೃತ್ ಗಾರ್ಡನ್‌ನಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಅಪ್ರೆಂಟಿಶಿಪ್ ಹಾಗೂ ಉದ್ಯೋಗ ಮೇಳ

- Advertisement -
- Advertisement -

ಉಡುಪಿ: ಪ್ರಧಾನಮಂತ್ರಿ ರಾಷ್ಟ್ರೀಯ ಅಪ್ರೆಂಟಿಶಿಪ್ ಮೇಳ ಹಾಗೂ ಉದ್ಯೋಗ ಮೇಳವನ್ನು ನಗರದ ಅಮೃತ್ ಗಾರ್ಡನ್ ನಲ್ಲಿ ಇಂದು ಆಯೋಜಿಸಲಾಗಿತ್ತು.

ಬಿಲ್ಲಾಡಿ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ ಮತ್ತು ಕೌಶಲ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವಿಭಾಗಿಯ ಕಚೇರಿ ಮೈಸೂರು ಇದರ ಸಹಯೋಗದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಮೂಡಬಿದಿರೆ ಆಳ್ವಾಸ್ ಎಜುಕೇಷನ್ ಫೌಂಡೇಶನ್ ಅಧ್ಯಕ್ಷ ಡಾ. ಮೋಹನ್ ಆಳ್ವ ಅವರು ಚಾಲನೆ ನೀಡಿದರು.

ರಾಮಕ್ಷೇತ್ರ ಮಹಾಸಂಸ್ಥಾನದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ , ವಿದ್ಯಾರ್ಥಿಗಳು ಉದ್ಯೋಗ ಸಿಕ್ಕಿಲ್ಲ ಎಂಬ ನಿರುತ್ಸಾಹವನ್ನು ಹೊಂದದೆ ಉದ್ಯೋಗಕ್ಕಾಗಿ ಪ್ರಯತ್ನ ಮುಂದುವರಿಸಬೇಕು. ಪ್ರಬಲವಾದ ಮನಸ್ಸಿನಿಂದ ಯಾವುದನ್ನಾದರೂ ಸಾಧಿಸಬಹುದು. ಅಂತಹ ಮನಸ್ಥಿತಿಯನ್ನು ಎಲ್ಲರೂ ಹೊಂದಬೇಕು ಎಂದು ಕರೆನೀಡಿದರು.

ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಅಧ್ಯಕ್ಷ ಸೂರ್ಯಕಾಂತ ಜೆ ಸುವರ್ಣ ಅಧ್ಯಕ್ಷತೆ ವಹಿಸಿದ್ದರು.

ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಮಾಜಿ ಶಾಸಕ ಹಾಗೂ ಗೌರವಾಧ್ಯಕ್ಷ ಕೆ. ರಘುಪತಿ ಭಟ್, ಮುಖಂಡರಾದ ಪದ್ಮರಾಜ್ ಆರ್., ರಮೇಶ್ ಕಾಂಚನ್, ಮಹೇಶ್ ಠಾಕೂರ್, ಓಬು ಪೂಜಾರಿ, ಗಣನಾಥ ಎಕ್ಕಾರ್, ಪ್ರವೀಣ್ ಎಂ. ಪೂಜಾರಿ, ಭಾಸ್ಕರ ಸುವರ್ಣ, ಸುಧಾಕರ ಅಮೀನ್, ನಾರಾಯಣ ಮೊದಲಾದವರು ಉಪಸ್ಥಿತರಿದ್ದರು.

- Advertisement -

Latest News

error: Content is protected !!