Wednesday, June 3, 2026
Homeಕರಾವಳಿಮಂಗಳೂರುಮೂಡಬಿದರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ಮೂಡಬಿದರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

- Advertisement -
- Advertisement -

ಮೂಡಬಿದರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿರುವ ಘಟನೆ ಬನ್ನಡ್ಕ ಸಮೀಪ ಶನಿವಾರ ಸಂಜೆ ನಡೆದಿದೆ.


ಕಾರ್ಕಳದಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ರಸ್ತೆ ಬದಿಗೆ ಪಲ್ಟಿಯಾಗಿದೆ. ಬಸ್ ನಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಲ್ಟಿ ಹೊಡೆದ ಬಸ್ ಹತ್ತಿರದಲ್ಲಿದ್ದ ದ್ವಿಚಕ್ರ ವಾಹನಕ್ಕೂ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಜಿತೇಶ್ ಎಂಬವರಿಗೆ ಗಂಭೀರ ಗಾಯವಾಗಿದೆ. ಇನ್ನು ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!