- Advertisement -
- Advertisement -
ಗುಂಡ್ಯ: ಬೆಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ Mercy ಹೆಸರಿನ ಖಾಸಗಿ ಬಸ್ ಅಪಘಾತವಾಗಿ ಹಲವರಿಗೆ ಗಾಯಗಳಾಗಿರುವ ಘಟನೆ
ಜೂ.7 ರಂದು ಗುಂಡ್ಯದಲ್ಲಿ ನಸುಕಿನ ಜಾವದಲ್ಲಿ ನಡೆದಿದೆ.
ನಸುಕಿನ ಜಾವ 3:30ಕ್ಕೆ ಗುಂಡ್ಯ ಸಮೀಪ ತಲುಪುತ್ತಿದ್ದಂತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಇಬ್ಬರನ್ನು ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಈ ಘಟನೆಯಲ್ಲಿ ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು ಚಾಲಕ ಸೇರಿದಂತೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -