Monday, June 8, 2026
Homeಕರಾವಳಿಮಂಗಳೂರುಬಂಟ್ವಾಳ: ಫರಂಗಿಪೇಟೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಖಾಸಗಿ ಬಸ್ ; ಹಲವರಿಗೆ ಗಾಯ

ಬಂಟ್ವಾಳ: ಫರಂಗಿಪೇಟೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಖಾಸಗಿ ಬಸ್ ; ಹಲವರಿಗೆ ಗಾಯ

- Advertisement -
- Advertisement -

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಹಲವರಿಗೆ ಗಾಯಗಳಾಗಿರುವ ಘಟನೆ ಫರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ನಡೆದಿದೆ.

ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಫರಂಗಿಪೇಟೆ ಹತ್ತನೇ ಮೈಲಿ ಕಲ್ಲು ಎಂಬಲ್ಲಿ ಪಲ್ಟಿಯಾಗಿದೆ.ಘಟನೆಗೆ .ಚಾಲಕನ ಅತಿ ವೇಗದ ಚಾಲನೆ ಅಥವಾ ವಾಹನದಲ್ಲಿ ಕಂಡು ಬಂದ ತಾಂತ್ರಿಕ ದೋಷಗಳಿಂದ ಅಪಘಾತ ಸಂಭವಿಸಿಬಹುದು ಎಂದು ಅಂದಾಜಿಸಲಾಗುತ್ತಿದೆ.

ಘಟನೆಯಿಂದ ಗಾಯಗೊಂಡವರ ಹೆಸರು ವಿಳಾಸದ ಮಾಹಿತಿ ಯಾವುದೇ ‌ಲಭ್ಯವಾಗಿಲ್ಲ. ಗಾಯಗೊಂಡ ಎಲ್ಲರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳೀಯ ಯುವಕರು ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

- Advertisement -

Latest News

error: Content is protected !!