Thursday, June 4, 2026
Homeಕರಾವಳಿಧರ್ಮಸ್ಥಳಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ; 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ; 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

- Advertisement -
- Advertisement -

ಶಿವಮೊಗ್ಗ: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ಸಂಭವಿಸಿದೆ.

ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ಕೆರೆಯ ತಿರುವಿನಲ್ಲಿ ಅಪಘಾತ ನಡೆದಿದ್ದು, ಖಾಸಗಿ ಸಾಗರದಿಂದ ಧರ್ಮಸ್ಥಳಕ್ಕೆ ತೆರಳುತ್ತಿತ್ತು.

ಬಸ್ ನಲ್ಲಿ 28ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದು, ಅಪಘಾತದಲ್ಲಿ 15 ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.

9 ಪ್ರಯಾಣಿಕರಿಗೆ ಆನಂದಪುರದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದ್ದು, ಉಳಿದ ಗಾಯಾಳುಗಳನ್ನು ಸಾಗರ ಮತ್ತು ಶಿವಮೊಗ್ಗ ಸರಕಾರಿ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.

- Advertisement -

Latest News

error: Content is protected !!