Thursday, June 4, 2026
Homeಕೊಡಗುಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ; ಎರಡು ಗಂಟೆ ಕಾಲ ರಾಷ್ಟ್ರೀಯ ಹೆದ್ದಾರಿ ಬ್ಲಾಕ್

ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ; ಎರಡು ಗಂಟೆ ಕಾಲ ರಾಷ್ಟ್ರೀಯ ಹೆದ್ದಾರಿ ಬ್ಲಾಕ್

- Advertisement -
- Advertisement -

ಮಡಿಕೇರಿ: ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ರಾಷ್ಟ್ರೀಯ ಹೆದ್ದಾರಿ ಬ್ಲಾಕ್ ಆದ ಘಟನೆ ಮಡಿಕೇರಿ ತಾಲೂಕಿನ ಜೋಡುಪಾಲ ಬಳಿ ನಡೆದಿದೆ.

ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಳಿಕ ಪಲ್ಟಿಯಾಗಿದೆ.

ಮಡಿಕೇರಿ‌-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಅಫಘಾತ ಸಂಭವಿಸಿದ್ದು, ಬಸ್ ನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಬಸ್ ಪಲ್ಟಿಯಾದ ಕಾರಣ ಎರಡು ಗಂಟೆಗಳ‌ ಕಾಲ‌ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದ್ದು, ಬಳಿಕ ಸ್ಥಳೀಯರ ಸಹಕಾರದಿಂದ ಬಸ್ ಅನ್ನು ತೆರವುಗೊಳಿಸಲಾಗಿದೆ‌.

ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

- Advertisement -

Latest News

error: Content is protected !!